ವಯನಾಡು ಭೂಕುಸಿತ ದುರಂತ ಕೇಸ್: ಆರ್ಥಿಕ ನೆರವು ನೀಡಿದ ರಶ್ಮಿಕಾ!

Date:

ವಯನಾಡು ಭೂಕುಸಿತ ದುರಂತದಲ್ಲಿ ಸಂಕಷ್ಟದಲ್ಲಿರುವರಿಗೆ ನೆರವಾಗಲು ಲಕ್ಷ ಲಕ್ಷ ಹಣವನ್ನು ಕೇರಳದ ಸಿಎಂ ಫಂಡ್‌ಗೆ ಸೌತ್ ನಟ, ನಟಿಯರು ದೇಣಿಗೆ ನೀಡಿದ್ದಾರೆ. ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಕೂಡ 10 ಲಕ್ಷ ನೀಡಿದ್ದಾರೆ.

ಅಲ್ಲದೇ ತಮಿಳು ನಟ ಸೂರ್ಯ, ಚಿಯಾನ್ ವಿಕ್ರಮ್, ಮಮ್ಮುಟ್ಟಿ, ದುಲ್ಕರ್ ಸಲ್ಮಾನ್, ಫಹಾದ್ ಫಾಸಿಲ್ ಸೇರಿದಂತೆ ಅನೇಕರು ನೆರವಿಗೆ ಬಂದಿದ್ದಾರೆ.

ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಕಾರ್ಯವೊಂದಕ್ಕಾಗಿ ಅತಿಥಿಯಾಗಿ ಕೇರಳಕ್ಕೆ ಆಗಮಿಸಿದ್ದರು. ಆಗ ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಅವರ ಪ್ರೀತಿ ನೋಡಿ ನಟಿ ಧನ್ಯವಾದ ತಿಳಿಸಿದ್ದರು. ಇದೀಗ ಕೇರಳದಲ್ಲಿ ಆಗಿರುವ ಭೂಕುಸಿತ ದುರಂತ ಕಂಡು ಅಲ್ಲಿನ ಸಿಎಂ ಫಂಡ್‌ಗೆ ನಟಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಟಿಯ ನಡೆಗೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್, ಕೇರಳದ ಸಿಎಂ ಫಂಡ್‌ಗೆ 20 ಲಕ್ಷ ರೂ. ದೇಣಿಗೆ ನೀಡುವ ಮೂಲಕ ನೆರವಾಗಿದ್ದಾರೆ. ಸೂರ್ಯ ಮತ್ತು ಜ್ಯೋತಿಕಾ ದಂಪತಿ, ನಟ ಕಾರ್ತಿ ಜಂಟಿಯಾಗಿ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಸ್ಟಾರ್ ನಟ ಮಮ್ಮುಟ್ಟಿ ಮತ್ತು ಪುತ್ರ ದುಲ್ಕರ್ ಸಲ್ಮಾನ್ ಜೊತೆಯಾಗಿ 35 ಲಕ್ಷ ರೂ. ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಫಹಾದ್ ಫಾಸಿಲ್, ನಜ್ರಿಯಾ ಜೋಡಿ 25 ಲಕ್ಷ ರೂ. ದೇಣಿಗೆ ನೀಡಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...