ಕೇರಳ: ಸೋಮವಾರ-ಮಂಗಳವಾರ ರಾತ್ರಿ ಸುರಿದ ರಣಮಳೆಗೆ ವಯನಾಡ್ನ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿತ್ತು. ನಾಲ್ಕೈದು ಗ್ರಾಮಗಳು ಸಂಪೂರ್ಣವಾಗಿ ಭೂಸಮಾಧಿಯಾಗಿದ್ದವು. ಭೂಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಕೇರಳದ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಕ್ಷಣಾ ಕಾರ್ಯಾಚರಣೆಯಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈಜೋಡಿಸಲಿದೆ. ರಕ್ಷಣಾ ತಂಡ, ಅಗತ್ಯ ಸಾಮಗ್ರಿ ಕಳುಹಿಸಲಾಗುತ್ತಿದೆ ಎಂದು ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.