No menu items!
20.9 C
Munich
Friday, August 21, 2026

ವರದಕ್ಷಿಣೆ ಕಿರುಕುಳ ಆರೋಪ: ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Must read

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಓರ್ವ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿ ಯಲ್ಲಿನ ಮನೆಯೊಂದರಲ್ಲಿ ಜರುಗಿದೆ. 27 ವರ್ಷದ ರಂಜಿತಾ ಮೃತ ಮಹಿಳೆ ಎನ್ನಲಾಗಿದೆ. ಅಲ್ಲದೇ ಪತ್ನಿ ರಜಿತಾಗೆ ಪತಿ ಮಧು ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ರಂಜಿತಾ ಅವರು ಮಧು ಅವರನ್ನು ಐದು ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ರಂಜಿತಾ ವೃತ್ತಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದರು. ಇನ್ನು ಪತಿ ಮಧು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ಮದುವೆಯಾದಗಿನಿಂದಲೂ ಮಧು ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ವರದಕ್ಷಿಣೆ ನೀಡಿಲ್ಲವೆಂದು ನಮ್ಮ ಮಗಳನ್ನು ಕೊಲೆ ಮಾಡಿದ್ದಾರೆಂದು ರಂಜಿತಾ ಪೋಷಕರು ಆರೋಪ ಮಾಡಿದ್ದಾರೆ. ವರದಕ್ಷಿಣೆ ಕಿರುಕುಳದ ಬಗ್ಗೆ ರಂಜಿತಾ ಆಗಾಗ ತಾಯಿ ಬಳಿ ಹೇಳಿದ್ದರು. ಅಲ್ಲದೆ ರಂಜಿತಾ ಸಾವಿಗೂ ಮುನ್ನ ತಾಯಿಗೆ ವಿಡಿಯೋ ಕಾಲ್ ಮಾಡಿದ್ದರು. ಬಳಿಕ ರಂಜಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜ್ಞಾನಭಾರತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article