ವರಮಹಾಲಕ್ಷ್ಮೀ ಹಬ್ಬಕ್ಕೆ ‘ಕಾಲಚಕ್ರ’ ಸಿನಿಮಾದ ಗಿಫ್ಟ್.. ‘ತರಗೆಲೆ ಸಂಸಾರ’ ಹಾಡು ಬಿಡುಗಡೆ

Date:

ವರಮಹಾಲಕ್ಷ್ಮಿ‌ ಹಬ್ಬಕ್ಕೆ ಕಾಲಚಕ್ರ ಸಿನಿಮಾದ ಹಾಡು ಬಿಡುಗಡೆಯಾಗಿದೆ. ವಸಿಷ್ಠ ಸಿಂಹ ನಾಯಕರಾಗಿ ನಟಿಸಿರುವ, ರಶ್ಮಿ ಫಿಲಂಸ್ ಮೂಲಕ ರಶ್ಮಿ.ಕೆ ಅವರು ನಿರ್ಮಿಸಿರುವ ‘ಕಾಲಚಕ್ರ’ ಚಿತ್ರದ ‘ತರಗೆಲೆ ಸಂಸಾರ’ ಹಾಡು ವರಮಹಾಲಕ್ಷ್ಮೀ ಹಬ್ಬದ ವಿಶೇಷವಾಗಿ ಬಿಡುಗಡೆಯಾಗಿದೆ. ಸಂತೋಷ್ ನಾಯಕ್ ರಚಿಸಿರುವ ಈ ಹಾಡನ್ನು ಹೆಸರಾಂತ ಗಾಯಕ ಕೈಲಾಷ್ ಕೇರ್ ಹಾಡಿದ್ದಾರೆ‌. ಸುಪ್ರಸಿದ್ಧ ಸಂಗೀತ ನಿರ್ದೇಶಕ ಗುರುಕಿರಣ್ ಈ ಹಾಡಿಗೆ ಸಂಗೀತ ನೀಡಿದ್ದಾರೆ. ಸುಮಂತ್ ಕ್ರಾಂತಿ ರಚನೆ ಹಾಗೂ ನಿರ್ದೇಶನ ಈ ಚಿತ್ರಕ್ಕಿದೆ. ಸೈಕಲಾಜಿಕಲ್ ಕಥಾ ಹಂದರವಿರುವ ಈ ಚಿತ್ರಕ್ಕೆ ಬೆಂಗಳೂರು, ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

ಲಾಕ್ ಡೌನ್ ಗೂ ಮುನ್ನ ನಡೆದಿದ್ದ ಅದ್ದೂರಿ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ‘ಕಾಲಚಕ್ರ’ ಚಿತ್ರದ ಟೀಸರ್ ಬಿಡುಗಡೆ ಮಾಡಿ, ಮೆಚ್ಚುಗೆ ಸೂಚಿಸಿದ್ದರು. ‘ಕಾಲಚಕ್ರ’ದ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡು ಸಿನಿರಸಿಕರ ಮನಗೆದ್ದಿದೆ. ಎಲ್.ಎಂ.ಸೂರಿ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ, ಡಿಫರೆಂಟ್ ಡ್ಯಾನಿ‌ ಸಾಹಸ ನಿರ್ದೇಶನ, ಮುರಳಿ ನೃತ್ಯ ನಿರ್ದೇಶನ ಹಾಗೂ ಮೋಹನ್.ಬಿ.ಕೆರೆ ಅವರ ಕಲಾ‌ ನಿರ್ದೇಶನವಿರುವ ಈ ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ. ವಸಿಷ್ಠ ಎನ್ ಸಿಂಹ, ರಕ್ಷ, ದೀಪಕ್ ಶೆಟ್ಟಿ, ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕಾಲಚಕ್ರ ಚಿತ್ರದ ಸಾಂಗ್ ನೋಡಿ ಸ್ಯಾಂಡಲ್ ವುಡ್ ನ ನಟ, ನಟಿಯರು ಹಾಗೂ ನಿರ್ದೇಶಕರು ಮೆಚ್ಚುಗೆಯ ಜೊತೆಗೆ ಶುಭ ಹಾರೈಸಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡಾಲಿ ಧನಂಜಯ್, ಮಾನ್ವಿತಾ ಹರೀಶ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಿನಾಸಂ ಸತೀಶ್, ಶ್ರೀಮುರುಳಿ, ನಿರ್ದೇಶಕರಾದ ಎಂ.ಡಿ.ಶ್ರೀಧರ್, ಬಹಾದ್ದೂರ್ ಚೇತನ್, ನಾಗತಿಹಳ್ಳಿ ಚಂದ್ರಶೇಖರ್, ಸಿಂಪಲ್ ಸುನಿ ಮುಂತಾದವ್ರು ಈ ಹಾಡನ್ನ ಮೆಚ್ಚಿಕೊಂಡಿದ್ದಾರೆ. ಇನ್ನು ಪೊಲೀಸ್ ಅಧಿಕಾರಿ ರವಿ ಚೆನ್ನಣ್ಣವರ್ ಕೂಡಾ ಈ ಸಾಂಗ್ ನೋಡಿ ಮೆಚ್ಚಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...