ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಂತರ ಭಾರತ ಟಿ20 ಸರಣಿಯನ್ನೂ ತನ್ನ ವಶಕ್ಕೆ ತೆಗೆದುಕೊಂಡಿದೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 3-2 ಅಂತರದಿಂದ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಸರಣಿ ಗೆಲುವಿನ ನಂತರ ಮಾತನಾಡಿದ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ಆರ್ಟನ್ ಭಾರತ ಈಗ ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ ಎಂದಿದ್ದಾರೆ.
ಆದರೆ ಇದೇ ಸಂದರ್ಭದಲ್ಲಿ ಆರ್ಟನ್ ಒಂದು ಮಾತು ಹೇಳಿ ಭಾರತ ತಂಡಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಭಾರತದಲ್ಲೇ ನಡೆಯುವ ಮುಂದಿನ ವಿಶ್ವಕಪ್‌ನಲ್ಲಿ ಭಾರತ ಈಗ ಫೆವರೀಟ್ ತಂಡ ಎನಿಸಿದರೂ ಭಾರತ ತಂಡಕ್ಕೆ ವಿಶ್ವಕಪ್‌ನ ಹಾದಿ ಹೂವಿನ ಹಾಸಿನಂತೆ ಇರುವುದಿಲ್ಲ ಎಂದು ಹೇಳಿದ್ದಾರೆ.
“ಐಪಿಎಲ್‌ನ ಕಾರಣದಿಂದಾಗಿ ಅವರು ತಳದಿಂದ ಸಾಕಷ್ಟು ಸಾಮರ್ಥ್ಯವನ್ನು ಹೊಂದಿದ್ದಾರೆ. ತಮ್ಮ ಮೂವರು ಪ್ರಮುಖ ಬೌಲರ್‌ಗಳನ್ನು ಹೊಂದದ ಹೊರತಾಗಿಯೂ ಅವರು ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿದ್ದಾರೆ, ಈ ಎಲ್ಲಾ ವಿಚಾರಗಳನ್ನು ಗಮನಿಸಬೇಕು, ಆದರೆ ಅವರು ತವರಿನಲ್ಲಿ ಆಡುತ್ತಿದ್ದಾರೆ” ಎಂದಿದ್ದಾರೆ.
“ಆದರೆ ವಿಶ್ವಕಪ್ ಭಾರರ ತಂಡಕ್ಕೆ ಸುಲಭ ಸವಾಲು ಆಗಿರುವುದಿಲ್ಲ. ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಭಾರತಕ್ಕೆ ದೊಡ್ಡ ಸವಾಲನ್ನು ನೀಡುತ್ತದೆ. ಇದಕ್ಕೆ ನೀವು ಬೆಲೆ ನೀಡಿದರೆ ಭಾರತ ಗೆಲ್ಲುವ ಮೆಚ್ಚಿನ ತಂಡವಾಗಿ ಇರುತ್ತದೆ” ಎಂದು ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತದ ಪರವಾಗಿ ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅದ್ಭುತವಾದ ಬ್ಯಾಟಿಂಗ್ ಪ್ರದರ್ಶಿಸಿ 224 ರನ್‌ಗಳನ್ನು ಗಳಿಸಲು ಕಾರಣರಾದರು. ಬಳಿಕ ಬೌಲಿಂಗ್‌ನಲ್ಲಿಯೂ ಮಿಂಚಿದ ಭಾರತದ ಪರವಾಗಿ ಭುವನೇಶ್ವರ್ ಕುಮಾರ್ ರನ್ ನಿಯಂತ್ರಿಸುವುದರ ಜೊತೆಗೆ 2 ವಿಕೆಟ್ ಕಿತ್ತು ಆಘಾತವನ್ನು ನೀಡಿದರು. ಶರ್ದೂಲ್ ಠಾಕೂರ್ ದುಬಾರಿ ಎನಿಸಿದರಾದರೂ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯ ಸೊಲಿನ ಬಳಿಕ ಪ್ರತಿಕ್ರಿಯಿಸಿದರು. ಸಂದರ್ಭದಲ್ಲಿ ಫಾರ್ಮ್ ಕಳೆದುಕೊಂಡು ಕಳೆದ ಮೂರು ಪಂದ್ಯಗಳಲ್ಇಯು ಕಳಪೆ ಪ್ರದರ್ಶನವನ್ನು ನೀಡಿದ ಕೆಎಲ್ ರಾಹುಲ್ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ ಟೀಮ್ ಇಂಡಿಯಾ ನಾಯಕ ಕೊಹ್ಲಿ.
ಆದರೆ ನಾಯಕ ವಿರಾಟ್ ಕೊಹ್ಲಿ ಕೆಎಲ್ ರಾಹುಲ್ ಅವರಂತಾ ಅದ್ಭುತ ಆಟಗಾರನ ಬೆಂಬಲಕ್ಕೆ ನಿಲ್ಲುವುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಕೆಎಲ್ ರಾಹುಲ್ ಓರ್ವ ಚಾಂಪಿಯನ್ ಆಟಗಾರ ಎಂದು ಕರೆದಿರುವ ವಿರಾಟ್ ಕೊಹ್ಲಿ ಆರಂಭಿಕನಾಗಿ ರೋಹಿತ್ ಶರ್ಮಾ ಜೊತೆಗೆ ಆತ ಮುಂದುವರಿಯುತ್ತಾರೆ ಎಂದು ತಿಳಿಸಿದ್ದಾರೆ.
“ಕೆಎಲ್ ರಾಹುಲ್ ಓರ್ವ ಚಾಂಪಿಯನ್ ಆಟಗಾರ. ಆತ ನಮ್ಮ ತಂಡದ ಮುಖ್ಯ ಆಟಗಾರನಾಗಿ ರೋಹಿತ್ ಶರ್ಮಾ ಜೊತೆಗೆ ಅಗ್ರ ಕ್ರಮಾಂಕದಲ್ಲಿ ಮುಂದುವರಿಯುತ್ತಾರೆ” ಎಂದು ವಿರಾಟ್ ಕೊಹ್ಲಿ ಪಂದ್ಯದ ಮುಕ್ತಾಯದ ಬಳಿಕ ಪ್ರಶಸ್ತಿ ವಿತರಣ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.