ವರ್ಷಿತಾ ಹತ್ಯೆ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ!
ಚಿತ್ರದುರ್ಗ: ವರ್ಷಿತಾ ಹತ್ಯೆ ಖಂಡಿಸಿ, ಚಿತ್ರದುರ್ಗ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಗೃಹ ಸಚಿವ ಡಾ. ಜಿ. ಪರಮೇಶ್ವರ ಫೋಟೋ ಹಿಡಿದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಸ್ಪತ್ರೆಯ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕೊಲೆಯಾದ ಯುವತಿ ಕುಟುಂಬಸ್ಥರ ಮಧ್ಯೆ ವಾಗ್ವಾದ ನಡೆದಿದೆ. ಹೋರಾಟಕ್ಕೆ ದಲಿತಪರ ಸಂಘಟನೆಗಳು ಸೇರಿ ಹಲವು ಸಂಘಟನೆಗಳು ಸೇರಿಕೊಂಡಿದ್ದವು. ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪೊಲೀಸರ ಹರಸಾಹಸ ಮಾಡಿದ್ದರು. ಅವಳು ನನ್ನ ತಂಗಿ ಇದ್ದಂತೆ, ಆರೋಪಿಗಳನ್ನು ಕೂಡಲೇ ಬಂಧನ ಮಾಡ್ತೀವಿ ಎಂದು ಯುವತಿಯ ಕುಟುಂಬಸ್ಥರಿಗೆ DYSP ದಿನಕರ್ ಭರವಸೆ ನೀಡಿದ್ದರು.