ವಾಯುಪಡೆ ವಿಮಾನ ಪತನ!

Date:

ಭಾರತೀಯ ವಾಯುಸೇನೆಗೆ ಸೇರಿದ ಮಿಗ್ 21 ಬೈಸನ್ ಯುದ್ಧ ವಿಮಾನ ರಾಜಸ್ಥಾನದಲ್ಲಿ ಪತನಗೊಂಡಿದೆ.
ರಾಜಸ್ಥಾನದ ಬರ್ಮರ್‌ನಲ್ಲಿ ವಿಮಾನ ಪತನವಾಗಿದ್ದು, ಪೈಲಟ್‌ನನ್ನು ರಕ್ಷಿಸಲಾಗಿದೆ. ಬರ್ಮರ್​ನಲ್ಲಿ ಯುದ್ಧ ವಿಮಾನದ ತರಬೇತಿ ವೇಳೆ ಈ ದುರಂತ ಬರ್ಮರ್​ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುತ್ತಿತ್ತು.

 

ಈ ವೇಳೆ ವಿಮಾನ ಪತನವಾಗಿದೆ. ಪೈಲಟನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.ಸಂಭವಿಸಿದ್ದು, ಪೈಲಟ್ ಅನ್ನು ಸುರಕ್ಷಿತವಾಗಿ ಹೊರತರಲಾಗಿದೆ. ವಿಮಾನ ಪತನವಾಗುತ್ತಿದ್ದಂತೆ ಗ್ರಾಮಸ್ಥರು ವಾಟರ್​ ಟ್ಯಾಂಕರ್​ಗಳನ್ನು ತರಿಸಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಅವರೇ ಪೈಲಟನ್ನು ಹೊರಗೆ ಎಳೆದು, ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಈ ದುರಂತಕ್ಕೆ ಕಾರಣವೇನೆಂದು ಇನ್ನೂ ಪತ್ತೆಯಾಗಿಲ್ಲ.

ವಿಮಾನ ಕೆಳಗೆ ಬೀಳುತ್ತಿದ್ದಂತೆ ಹೊತ್ತಿ ಉರಿದಿದೆ, ಇಂದು ಸಂಜೆ 5.30ರ ವೇಳೆಗೆ ಈ ಘಟನೆ ಸಂಭವಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ಉತ್ತರ್​ಲಾಯ್ ವಾಯುಪಡೆಯ ಅಧಿಕಾರಿಗಳು ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

 

ಮೇ ತಿಂಗಳಲ್ಲಿ ಪಂಜಾಬ್‌ನ ಮೊಗಾ ಬಳಿ ತಡರಾತ್ರಿ ಭಾರತೀಯ ವಾಯುಪಡೆಯ ಮಿಗ್ -21 ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಪೈಲಟ್​ ಸಾವನ್ನಪ್ಪಿದ್ದಾರೆ.

ಅಪಘಾತ ಸಂಭವಿಸಿದಾಗ ವಿಮಾನವು ದಿನನಿತ್ಯದ ತರಬೇತಿ ಹಂತದಲ್ಲಿತ್ತು. ಐಎಎಫ್ ಪ್ರಕಾರ, ಪೈಲಟ್ ಸ್ಕ್ವಾಟನ್​ ಲೀಡರ್​ ಆರ್.ಅಭಿನವ್ ಚೌಧರಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.

“ಕಳೆದ ರಾತ್ರಿ ಪಶ್ಚಿಮ ವಲಯದಲ್ಲಿ ಐಎಎಫ್‌ನ ಬೈಸನ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ. ಪೈಲಟ್ ಸ್ಕ್ವಾಟನ್​ ಲೀಡರ್​ ಆರ್.ಅಭಿನವ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿವೆ. ದುರಂತಕ್ಕೆ ಐಎಎಫ್‌ ಶೋಕ ವ್ಯಕ್ತಪಡಿಸುತ್ತದೆ ಮತ್ತು ದುಃಖಿತ ಕುಟುಂಬದೊಂದಿಗೆ ನಿಲ್ಲುತ್ತದೆ” ಎಂದು ಐಎಎಫ್​ ಟ್ವೀಟ್​ ಮಾಡಿದೆ.

 

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...