ವಾಲ್ಮೀಕಿ ಅಕ್ರಮ ಪ್ರಕರಣ: ಬಿ.ನಾಗೇಂದ್ರ, ಬಸವನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ

Date:

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ.
ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ. ರಾಮ್ ರಹೀಮ್ ಕಾಲೊನಿಯಲ್ಲಿರುವ ದದ್ದಲ್ ಮನೆಯ ಮೇಲೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ರಾಮ್ಕ್ವ್ ಅಪಾರ್ಟ್ಮೆಂಟ್ನಲ್ಲಿರುವ ನಾಗೇಂದ್ರ ಅವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿ ಬಸವನಗೌಡ ದದ್ದಲ್ ನಿವಾಸವಲ್ಲದೆ, ಬೆಂಗಳೂರು ನಗರದ ಯಲಹಂಕ, ಕೋರಮಂಗಲ ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...