ವಾಲ್ಮೀಕಿ ಗುರುಪೀಠದ ಸ್ವಾಮೀಜಿಗೆ ಲಘು ಹೃದಯಾಘಾತ!

Date:

ವಾಲ್ಮೀಕಿ ಗುರುಪೀಠದ ಸ್ವಾಮೀಜಿಗೆ ಲಘು ಹೃದಯಾಘಾತ!

ರಾಯಚೂರು: ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಸ್ವಾಮೀಜಿ ಅವರು ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ರಾಯಚೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂದರ್ಭದಲ್ಲಿ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಸದ್ಯ ಸ್ವಾಮೀಜಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಚಿಕಿತ್ಸೆಗಾಗಿ ಅವರನ್ನು ಹೈದರಾಬಾದ್‌ಗೆ ಕಳುಹಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...