ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ ಎಸ್‌ ಐಟಿ ರಚನೆ

Date:

ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ತನಿಖೆಗೆ ಎಸ್‌ ಐಟಿ ರಚಿಸಲಾಗಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಅವ್ಯವಹಾರ ಹಾಗೂ ನಿಗಮದ‌ ಲೆಕ್ಕಾಧಿಕಾರಿಯಾಗಿದ್ದ ಚಂದ್ರಶೇಖರನ್ ಆತ್ಮಹತ್ಯೆ ಸಂಬಂಧ ಸಮಗ್ರ ತನಿಖೆ‌ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ‌. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಒಂದು ವರ್ಷದಲ್ಲಿ ಪ್ರತ್ಯೇಕ ಮೂರು ಅಪರಾಧ ಪ್ರಕರಣಗಳಲ್ಲಿ ಮೂರನೇ ಎಸ್‌ಐಟಿ ನಿಯೋಜಿಸದಂತಾಗಿದೆ. ಬಿಟ್ ಕಾಯಿನ್ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಹಾಗೂ‌ ಇದೀಗ ವಾಲ್ಮೀಕಿ ನಿಗಮ ಲೆಕ್ಕಾಧಿಕಾರಿ ಸಾವು ಹಾಗೂ ಬಹುಕೋಟಿ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ಇಂದು ವಿಶೇಷ ತನಿಖಾ ತಂಡ ರಚಿಸಲಾಗಿದೆ.
ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್ ಕರ್ಬೀಕರ್ ನೇತೃತ್ವದಲ್ಲಿ ಎಸ್‌ಐಟಿ ರಚನೆಯಾಗಿದೆ. ನಗರ ದಕ್ಷಿಣ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜ್, ಬೆಂಗಳೂರು ನಗರ ಗುಪ್ತವಾರ್ತೆಯ ಎಸ್ಪಿ ಹರಿರಾಮ್, ಸಿಐಡಿ ಪೊಲೀಸ್ ಅಧೀಕ್ಷಕ ರಾಘವೇಂದ್ರ ಕೆ.ಹೆಗಡೆ ಅವರನ್ನು ಈ ತನಿಖಾ ತಂಡ ಒಳಗೊಂಡಿದೆ. ತಂಡಕ್ಕೆ ಅಗತ್ಯಬಿದ್ದಲ್ಲಿ ಹೆಚ್ಚುವರಿ‌ ಪೊಲೀಸ್ ಸಿಬ್ಬಂದಿ ನಿಯೋಜಿಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...