ಬೆಂಗಳೂರು: ದಲಿತರ ಹಣವನ್ನು ಲೂಟಿ ಹೊಡೆದ ಸರ್ಕಾರ ಇದು. ನೀವು ಈ ಸರ್ಕಾರದ ರಾಜೀನಾಮೆ ಪಡೆಯಲು ಬಂದಿದ್ದೀರಾ? ಎಂದು ರಾಹುಲ್ ಗಾಂಧಿ ಅವರಿಗೆ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಕೇಳಿದರು. ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ರಾಜೀನಾಮೆ ಪಡೆಯುತ್ತೀರಾ? ಪಕ್ಷದಿಂದ ಉಚ್ಚಾಟಿಸುತ್ತೀರಾ? ಅವರನ್ನ ಬಂಧಿಸುತ್ತೀರಾ? ಸಾಕ್ಷಿ ನಾಶ ಮಾಡುವ ಬಗ್ಗೆ ಮಹತ್ವದ ಸಭೆ ನಡೆಸಿದ್ದ ಸಚಿವ ಶರಣಪ್ರಕಾಶ್ ಪಾಟೀಲರನ್ನು ಬಂಧಿಸುವಿರಾ? ಅವರ ಉಚ್ಚಾಟನೆ ಮಾಡುವಿರಾ? ಎಂದು ಪ್ರಶ್ನೆಗಳ ಮಳೆ ಸುರಿಸಿದರು.
ಇನ್ನೂ ಹಗರಣದ ಹಿಂದೆ ದೊಡ್ಡ ಜಾಲವೇ ಇದ್ದಂತಿದೆ, ಎಲ್ಲರೂ ಅನುಕೂಲ ಪಡೆದುಕೊಂಡಂತೆ ಕಾಣುತ್ತಿದೆ. ಹಾಗಾಗಿ ಎಲ್ಲ ಸಂದೇಹಗಳಿಗೆ ಉತ್ತರ ಕೊಟ್ಟು ಕ್ರಮ ವಹಿಸಬೇಕು. ಕರ್ಮಕಾಂಡ ಮಾಡಿ ಭಂಡತನದಲ್ಲಿ ಏನೂ ಉತ್ತರ ಕೊಡದೇ ನಾಗೇಂದ್ರ ಅವರ ರಾಜೀನಾಮೆಯನ್ನು ಅತ್ಯಂತ ಕಷ್ಟಪಟ್ಟು ಪಡೆದಿದ್ದಾರೆ. ಅವರ ಬಂಧನವೂ ಆಗಬೇಕಿತ್ತು, ಬಂಧಿಸುವ ಕಾರ್ಯವನ್ನು ಸಿಬಿಐನವರಿಗೆ ಬಿಡಿ ಎಂದು ಆಗ್ರಹಿಸಿದರು.
ವಾಲ್ಮೀಕಿ ನಿಗಮದ ಹಗರಣದ ಹಿಂದೆ ದೊಡ್ಡ ಜಾಲವೇ ಇದ್ದಂತಿದೆ !
Date: