No menu items!
20.9 C
Munich
Monday, May 25, 2026

ವಾಲ್ಮೀಕಿ ನಿಗಮ ಹಗರಣ ಕೇಸ್: ಮಾಜಿ ಸಚಿವ ಬಿ. ನಾಗೇಂದ್ರ PA ಅರೆಸ್ಟ್‌

Must read

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ʼನನ್ನು ಅರೆಸ್ಟ್‌ ಮಾಡಿದ್ದಾರೆ. ನಾಗೇಂದ್ರ ಅವರ ಪಿಎ ಹರೀಶ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿ ಶಾಂತಿನಗರದ ಇಡಿ ಕಚೇರಿಗೆ ಕರೆತಂದಿದ್ದಾರೆ. ಅಕ್ರಮವಾಗಿ ಹಣ ಸಾಗಾಟದಲ್ಲಿ ಹರೀಶ್ ಪಾತ್ರ ವಹಿಸಿರುವುದು ಇಡಿ ತನಿಖೆಯಿಂದ ದೃಢಪಟ್ಟಿದೆ. ಸಚಿವರ ಪರವಾಗಿ ಪಿಎ ಡೀಲ್ ನಡೆಸಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿರುವ ಬಸನಗೌಡ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಮನೆ ಮೇಲೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದರು.

- Advertisement -spot_img

More articles

- Advertisement -spot_img

Latest article