ವಾಹನ ಸವಾರರೇ ನೀವು ನೋಡಲೇಬೇಕಾದ ಸ್ಟೋರಿ: ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ಸಂಚಾರ ಬಂದ್​!

Date:

 

ಬೆಂಗಳೂರು:- ವಾಹನ ಸವಾರರೇ ಇದು ನೀವು ಈ ಸುದ್ದಿ ನೋಡಲೇಬೇಕು. ಯಾಕೆ ಗೊತ್ತಾ ಪ್ರತಿಷ್ಟಿತ ಬೆಂಗಳೂರಿನ ಈ ರಸ್ತೆ 1 ವಾರ ಬಂದ್ ಆಗಲಿದೆ.

ಹೌದು, ಹೊರ ವರ್ತುಲ ರಸ್ತೆಯ ಐಬಿಐಎಸ್​ ಹೊಟೇಟಲ್​ನಿಂದ ದೇವರಬೀಸನಹಳ್ಳಿ ಜಂಕ್ಷನ್​ವರೆಗಿನ ಸರ್ವಿಸ್​ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸರ್ವಿಸ್​ ರಸ್ತೆಯಲ್ಲಿ ಬಿಎಂಆರ್​ಸಿಎಲ್ ಮತ್ತು ಬೆಸ್ಕಾಂ ವತಿಯಿಂದ ಕೇಬಲ್​​ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಆಗಸ್ಟ್​​ 13ರವರೆಗೆ ಈ ರಸ್ತೆಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಿ ಎಂದು ಬೆಂಗಳೂರು ಸಂಚಾರ ಪೊಲೀಸ್​​ ಮಾಧ್ಯಮ ಪ್ರಕಟಣೆ ಹೊರಡಸಿದೆ. ಬದಲಿ ಮಾರ್ಗ ಸೂಚಿಸಲಾಗಿದೆ.

ಪರ್ಯಾಯ ಮಾರ್ಗ
ಕಾಮಗಾರಿ ಸಮಯದಲ್ಲಿ ಸುಗಮ ಸಂಚಾರಕ್ಕಾಗಿ ದೇವರಬಿಸನಹಳ್ಳಿ ಮೇಲು ಸೇತುವೆ ಮೂಲಕ ಸಂಚರಿಸಬಹುದಾಗಿದೆ.

ನೈಸ್​ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಷೇಧ
ನೈಸ್​ ರಸ್ತೆಯಲ್ಲಿ ಎಲ್ಲ ದಿನ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ಹೊಸ ನಿಯಮ ಆಗಸ್ಟ್​ 2 ರಿಂದ ಜಾರಿಗೆ ಬಂದಿದೆ.

ಭಾರಿ ಸರಕು ವಾಹನಗಳು ಬೆಂಗಳೂರಿನ ರಸ್ತೆಯಲ್ಲಿ ಸಂಚರಿಸಲು ಸಮಯ ನಿಗದಿ ಮಾಡಲಾಗಿದೆ. ವಾರದ ಎಲ್ಲ ದಿನಗಳಲ್ಲಿ ಬೆಳಗ್ಗೆ 7 ರಿಂದ 11 ಮತ್ತು ಸಂಜೆ 4 ರಿಂದ 10ರವರೆಗೆ ಭಾರಿ ಸರಕು ವಾಹನಗಳು ಬೆಂಗಳೂರು ಮಹಾನಗರದ ಒಳಗಿನ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ. ಆದರೆ, ಎಲ್ಲ ಶನಿವಾರಗಳಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 2:30ರವರೆಗೆ ಹಾಗೂ ಸಂಜೆ 4:30 ರಿಂದ ರಾತ್ರಿ 9ಗಂಟೆಯವರೆಗೆ ನಿಷೇಧಿಸಿ ಮಾರ್ಪಾಡು ಮಾಡಲಾಗಿದೆ. ಈ ಹೊಸ ನಿಯಮ ಈಗಾಗಲೇ ಜಾರಿಯಾಗಿದೆ. ಇನ್ನುಳಿದಂತೆ ವಾರದ ಆರು ದಿನಗಳಲ್ಲಿ ಮೊದಲಿನಂತೆಯೇ ಮುಂದುವರೆಯಲಿದೆ.

Share post:

Subscribe

spot_imgspot_img

Popular

More like this
Related

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...