ವಾಹನ ಸವಾರರ ಗಮನಕ್ಕೆ: ಈ ಏರಿಯಗಳಲ್ಲಿ ಇಂದು ಸಂಚಾರ ಬಂದ್
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಎರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಪ್ರವಾದಿ ಮೊಹಮ್ಮದರ ಜನ್ಮದಿನದ ಅಂಗವಾಗಿ ಬೆಂಗಳೂರು ನಗರವೂ ಸಜ್ಜಾಗಿದೆ. ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆ ಮತ್ತು ಮೆರವಣಿಗೆ ಮಾಡುತ್ತಾರೆ. ಹೀಗಾಗಿ ಸವಾರರ ಹಿತದೃಷ್ಟಿಯಿಂದ ಬೆಂಗಳೂರು ಸಂಚಾರ ಪೊಲೀಸರು ಕೆಲ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ರಾತ್ರಿ 10 ಗಂಟೆವರೆಗೆ ವಾಹನ ಸಂಚಾರ ನಿರ್ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ, ಪುಲಿಕೇಶಿನಗರ ಮತ್ತು ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಗವಾರ ಮುಖ್ಯರಸ್ತೆ, ಟ್ಯಾನರಿ ಮುಖ್ಯರಸ್ತೆ. ಮತ್ತು ಹೇನ್ಸ್ ರಸ್ತೆ ಮಿಲ್ಲರ್ಸ್ ಮುಖ್ಯರಸ್ತೆಯಲ್ಲಿ ಈದ್-ಎ-ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸ್ತಬ್ದ ಚಿತ್ರಗಳು, ವಾದ್ಯಗಳ ಮುಖಾಂತರ ಶಿವಾಜಿನಗರ ಕಂಬಲ್ ಪೋಷ್ ದರ್ಗಾಕ್ಕೆ ಮೆರವಣಿಗೆ ಮೂಲಕ ಸಾಗುವುದರಿಂದ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.
ಸಂಚಾರ ನಿರ್ಬಂಧ:
ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ.
ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ ಸಂಚಾರ ನಿರ್ಬಂಧ.
ಮಾಸ್ಕ್ ಜಂಕ್ಷನ್‌ನಿಂದ ಎಂಎಂ ರಸ್ತೆ ಮೂಲಕ ನೇತಾಜಿ ಜಂಕ್ಷನ್‌ವರೆಗೆ ಎಂ.ಎಂ. ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಬದಲಾಗಿ ಏಕ ಮುಖ ಸಂಚಾರವನ್ನಾಗಿ ತಾತ್ಕಾಲಿಕವಾಗಿ ಮಾರ್ಪಾಡು ಮಾಡಲಾಗಿದ್ದು, ನೇತಾಜಿ ಜಂಕ್ಷನ್‌ನಿಂದ ಮಾಸ್ಕ್ ಜಂಕ್ಷನ್ ಕಡೆಗೆ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ.
ಹೇನ್ಸ್ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗಗಳು
ನಾಗವಾರ ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಸಂಚರಿಸುವ ವಾಹನಗಳು ನಾಗವಾರ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೆಣ್ಣೂರು ಜಂಕ್ಷನ್ ರಸ್ತೆಯಲ್ಲಿ ಬಲ ತಿರುವು ಪಡೆದು ಕಾಚರಕನಹಳ್ಳಿ ರಸ್ತೆ, ಚಂದ್ರಿಕ ಜಂಕ್ಷನ್ ಬಳಿ ಎಡ ತಿರುವು ಪಡೆದು ಲಿಂಗರಾಜಪುರಂ ಪ್ರೈ ಓವರ್ ಮೂಲಕ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ರಾಬರ್ಟ್‌ನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿ ನಗರ ಕಡೆಗೆ ಸಂಚರಸಬಹುದು. ನಾಗವಾರ ಜಂಕ್ಷನ್‌ನಿಂದ ಬಲತಿರುವು ಪಡೆದು ಹೆಬ್ಬಾಳ ಮುಖಾಂತರ ನಗರಕ್ಕೆ ಸಂಚರಿಸಲು ಅವಕಾಶವಿದೆ.
ಶಿವಾಜಿ ನಗರದ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳನ್ನು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆಯವರು ಮಾರ್ಗ ಬದಲಾವಣೆ ಮಾಡಿ, ಸ್ಪೆನ್ಸರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದುಕೊಂಡು ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ವೀಲರ್ಸ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆಗೆ ಸಂಚರಿಸಬಹುದು.
ಆರ್.ಟಿ.ನಗರದಿಂದ ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳನ್ನು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಕಡೆಗೆ ಸಂಚಾರ ಮಾಡಬಹುದು.
ನೇತಾಜಿ ರಸ್ತೆ ಕಡೆಯಿಂದ ಟ್ಯಾನರಿ ರಸ್ತೆ ಮೂಲಕ ನಾಗಾವರ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ನೇತಾಜಿ ಜಂಕ್ಷನ್ ಇಂದ ಬಲತಿರುವು ಮಾಸ್ಕ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಕ್ಲಾರೆನ್ಸ್ ರೈಲ್ವೆ ಮೇಲ್ಲೇತುವೆಯಲ್ಲಿ ಪಾಟರಿ ರಸ್ತೆಗೆ ಬಲ ತಿರುವು ಪಡೆದು ಪಾಟರಿ ರಸ್ತೆ ಮತ್ತು ಹೆಣ್ಣೂರು ರಸ್ತೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೆಣ್ಣೂರು ಮುಖ್ಯರಸ್ತೆ ಲಿಂಗರಾಜಪುರಂ ಪ್ರೈಓವರ್ ಮುಖಾಂತರ ಹೆಣ್ಣೂರು, ಬಾಣಸವಾಡಿ ಹಾಗೂ ಹೊರ ವರ್ತುಲ ರಸ್ತೆ ಕಡೆಗೆ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.
ಮಾಸ್ಕ್ ಜಂಕ್ಷನ್‌ನಿಂದ ಎಂ.ಎಂ ರಸ್ತೆಯಲ್ಲಿ ನೇತಾಜಿ ಜಂಕ್ಷನ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ಮಾಸ್ಕ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಮಾಸ್ಕ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ಬಲ ತಿರುವು ಪಡೆದು ಕೋಲ್ಸ್ ರಸ್ತೆಯ ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ ಸೌಂಡರ್ಸ್ ರಸ್ತೆಗೆ ಎಡ ತಿರುವು ಪಡೆದು ನೇರವಾಗಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ತಲುಪಿ ಕೋಲ್ಸ್ ಪಾರ್ಕ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೇನ್ಸ್ ಜಂಕ್ಷನ್ ತಲುಪಬಹುದು.