ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಯಿಂದಲೇ ಅತ್ತೆ-ಮಾವನ ಮೇಲೆ ಹಲ್ಲೆ: ಸೊಸೆ ವಿರುದ್ಧ ದೂರು ದಾಖಲು
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಲೇ ಇದೆ. ಆದರೆ ಕೆಲವು ಮಹಿಳೆಯರು ಮಾತ್ರ ಈ ಸಂಬಂಧದ ಕಾನೂನನ್ನು ದುರುಪಯೋಗ ಮಾಡಿಕೊಂಡಿರುವ ಸಾಕಷ್ಟು ಘಟನೆಗಳು ಸಹ ನಮ್ಮ ಕಣ್ಣ ಮುಂದೆ ಇವೆ. ಅದರಂತೆ ಇದೀಗ ಬೆಂಗಳೂರಿನ ಪ್ರತಿಷ್ಠಿತ ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ವಯಸ್ಸಾದ ಅತ್ತೆ ಮಾವನ ಮೇಲೆ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿದೆ.
ಮಾರ್ಚ್ 10 ರಂದು ರಾತ್ರಿ 8:15 ಕ್ಕೆ ಈ ಘಟನೆ ನಡೆದಿದ್ದು, ವಿಡಿಯೋದಲ್ಲಿ ಮಹಿಳೆ ವೈದ್ಯೆ ಡಾ. ಪ್ರಿಯದರ್ಶಿನಿ ಎಂದು ಹೇಳಲಾಗುತ್ತಿದೆ. ಏಕಾಏಕಿ ಮನೆಗೆ ಬಂದು ವಯಸ್ಸಾದ ಅತ್ತೆ ಮಾವನ ಮೇಲೆ ಹಲ್ಲೆ ಮಾಡಿದ್ದು, ಅತ್ತೆಯ ತಾಳಿ ಹಿಡಿದು, ಕಾಲಿಂದ ಹೊಡೆದು ಹಿಂಸೆ ನೀಡಿದ್ದಾರೆ. ಹಲ್ಲೆ ಮಾಡಿರುವ ಟ್ವೀಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಹಲವರು ಬೆಂಗಳೂರು ನಗರ ಪೊಲೀಸ್‌ಗೆ ಟ್ಯಾಗ್ ಮಾಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ವೈದ್ಯ ವಿರುದ್ಧ ದೂರು ಮಾವನಾದ ನರಸಿಂಹಯ್ಯ ಎಂಬುವವರು ದೂರು ನೀಡಿದ್ದಾರೆ. ” 2007 ರಲ್ಲಿ ನನ್ನ ಮಗ ಹಾಗೂ ಪ್ರಿಯದರ್ಶಿನಿ ಎಂಬುವವರಿಗೆ ಮದುವೆಯಾಗಿತ್ತು. ಸದ್ಯ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಪ್ರಕರಣವು ಕೋರ್ಟ್‌ನಲ್ಲಿದೆ. ಮಾರ್ಚ್ 10 ರ ರಾತ್ರಿ ಏಕಾಏಕಿ ಪ್ರಿಯದರ್ಶಿನಿ ತನ್ನ ಮಕ್ಕಳೊಂದಿಗೆ ಮನೆಗೆ ಬಂದು ನನಗೆ, ನನ್ನ ಪತ್ನಿ ಹಾಗೂ ಮಗನಿಗೆ ಅವ್ಯಾಚ್ಯ ಪದಗಳಿಂದ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.