ಡಿ ಕೆ ಶಿವಕುಮಾರ್ ನಾಳೆ ಬೆಳಗ್ಗೆ 11 ಗಂಟೆಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೂಚನೆ ನೀಡಿದೆ. ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಬರಲು ಇ.ಡಿ. ಸಮನ್ಸ್ ಕೊಟ್ಟಿದ್ದಾರೆ. ಕೊಟ್ಟ ಮಾತಿನಂತೆ ಇ.ಡಿ. ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.
ಈ ಕುರಿತು ರಾಮನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ.ಎಂ.ಲಿಂಗಪ್ಪ, ಡಿ ಕೆ ಶಿವಕುಮಾರ್ ಅವರು ಇಡಿ ಸಂಕಷ್ಟ ಎದುರಸಿಸುತ್ತಿರುವುದಕ್ಕೆ ಬಿಜೆಪಿ ಕೇಂದ್ರ ಸರ್ಕಾರವೇ ಮೂಲ ಕಾರಣ ಎಂದು ಹೇಳಿದ್ದಾರೆ ಕೇಂದ್ರ ಸರ್ಕಾರ ಡಿಕೆಶಿ ಕುಟುಂಬಕ್ಕೆ ತೊಂದರೆ ಕೊಡಲು ತೀರ್ಮಾನಿಸಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.