No menu items!
15.7 C
Munich
Sunday, April 19, 2026

ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ: ನಾಲ್ವರ ಸಾವು

Must read

ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ: ನಾಲ್ವರ ಸಾವು ಶಂಕೆ, 25ಕ್ಕೂ ಹೆಚ್ಚು ಮಂದಿಗೆ ಗಾಯ
ವಿಜಯನಗರ: ಜಿಲ್ಲೆಯ ಮರಿಯಮ್ಮನಹಳ್ಳಿ ಸಮೀಪದ ಡಣಾಪುರದಲ್ಲಿ ಇಂದು ಬೆಳಿಗ್ಗೆ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಹರಿಯಾಣದಿಂದ ಬೆಳ್ಳುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಕಾರು, ಸರ್ಕಾರಿ ಬಸ್ ಹಾಗೂ ಕನಿಷ್ಠ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಲಾರಿ ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿದೆ.
ಹೊಸಪೇಟೆಯಿಂದ ಚಿತ್ರದುರ್ಗದತ್ತ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಲಾರಿ ಹಿಂಬದಿಯಿಂದ ಗುದ್ದಿದ ಪರಿಣಾಮ, ಬಸ್‌ನಲ್ಲಿದ್ದ ಸುಮಾರು 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತ ಸಂಭವಿಸಿದ ಸ್ಥಳದಲ್ಲಿ ಹೆದ್ದಾರಿ ದುರಸ್ತಿ ಹಾಗೂ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದೇ ಕಾರಣದಿಂದ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಇದೇ ಲಾರಿ ಅಪಘಾತಕ್ಕೂ ಮುನ್ನ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಸ್ಮಯರ್ ಕಂಪನಿ ಬಳಿ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಮುಂದುವರಿದಿತ್ತು. ಆ ಘಟನೆದಲ್ಲಿ ಮೂವರು ಗಾಯಗೊಂಡಿದ್ದಾರೆ.
ಅಪಘಾತದ ಪರಿಣಾಮವಾಗಿ ಹೆದ್ದಾರಿಯಲ್ಲಿ ಎರಡೂ ಬದಿಗಳಲ್ಲಿ ಸುಮಾರು ಮೂರು ಕಿಲೋಮೀಟರ್‌ವರೆಗೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article