ವಿಜಯ್ ಸಲಗಕ್ಕೆ ಸುದೀಪ್ ಕೋಟಿಗೊಬ್ಬ 3 ಡೋಂಟ್ ಕೇರ್

Date:

ಅಕ್ಟೋಬರ್ 1 ರಿಂದ ಕರ್ನಾಟಕದ ಹಲವು ರಾಜ್ಯಗಳಲ್ಲಿ ಚಿತ್ರಮಂದಿರಗಳು ಪೂರ್ಣ ಪ್ರಮಾಣದ ಸೀಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿವೆ.

 

ಚಿತ್ರಮಂದಿರಗಳನ್ನು ಪೂರ್ಣವಾಗಿ ತೆರೆಯುವಂತೆ ಕರ್ನಾಟಕ ಸರ್ಕಾರ ಆದೇಶ ನೀಡುತ್ತಿದ್ದಂತೆಯೇ ಹಲವು ಚಿತ್ರತಂಡಗಳು ತಮ್ಮ ಸಿನಿಮಾಗಳ ಬಿಡುಗಡೆ ದಿನಾಂಕವನ್ನು ನಾ ಮುಂದು-ತಾ ಮುಂದೆ ಎಂದು ಘೋಷಿಸುತ್ತಿವೆ. ಹಬ್ಬದ ಸೀಸನ್‌ಗೆ ಸರಿಯಾಗಿ ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡುತ್ತಿರುವುದು ಕನ್ನಡ ಚಿತ್ರರಂಗಕ್ಕೆ ಈ ಹಿಂದಿನ ಬೇಸರವನ್ನು ತುಸು ಮರೆಸಿದೆ.

 

ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’, ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿರುವ ‘ಸಲಗ’, ‘ಸುದೀಪ್ ನಟನೆಯ ‘ಕೋಟಿಗೊಬ್ಬ 3’, ಲವ್ಲಿ ಪ್ರೇಮ್ ನಟನೆಯ ‘ಪ್ರೇಮಂ ಪೂಜ್ಯಂ’ ಇನ್ನೂ ಕೆಲವು ಸಿನಿಮಾಗಳು ಬಿಡುಗಡೆ ದಿನಾಂಕ ಘೋಷಿಸಿವೆ. ಆದರೆ ‘ಸಲಗ’ ಹಾಗೂ ‘ಕೋಟಿಗೊಬ್ಬ 3’ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗಲಿದ್ದು, ಸ್ಟಾರ್‌ ವಾರ್‌ಗೆ ಅವಕಾಶ ಮಾಡಿಕೊಟ್ಟಿದೆ.

ಈ ಬಗ್ಗೆ ನಿನ್ನೆ ಮಾತನಾಡಿದ್ದ ‘ಸಲಗ’ ಸಿನಿಮಾ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ”ಸುದೀಪ್ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸುತ್ತೇನೆ” ಎಂದಿದ್ದರು. ಆದರೆ ಇಂದು ಮಾತನಾಡಿರುವ ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪ ಬಾಬು ತಮ್ಮ ಸಿನಿಮಾ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

 

”ಮತ್ತೆ-ಮತ್ತೆ ಸಿನಿಮಾ ಬಿಡುಗಡೆ ಮುಂದಕ್ಕೆ ಹಾಕಿಕೊಂಡು ಇರಲು ನನ್ನಿಂದಂತೂ ಸಾಧ್ಯವಿಲ್ಲ. ಈಗಾಗಲೇ ಬಹಳ ಕಷ್ಟ ಅನುಭವಿಸಿದ್ದೀನಿ. ಈ ವಿಷಯ ಶ್ರೀಕಾಂತ್‌ಗೂ (‘ಸಲಗ’ ನಿರ್ಮಾಪಕ) ಗೊತ್ತು. ನಾವು ಸಿನಿಮಾ ಬಿಡುಗಡೆ ಮಾಡಲಿರುವ ದಿನ ಬಹಳ ಒಳ್ಳೆಯ ದಿನ. ಅವರೂ ತಮ್ಮ ಸಿನಿಮಾ ಬಿಡುಗಡೆ ಮಾಡಲಿ ಬಿಡಿ, ನೋಡೋಣ” ಎಂದಿದ್ದಾರೆ ನಿರ್ಮಾಪಕ ಸೂರಪ್ಪ ಬಾಬು.

”ನಾಡ ಹಬ್ಬ ದಸರಾಕ್ಕೆ ನಮ್ಮ ಸಿನಿಮಾ ಬಿಡುಗಡೆ ಮಾಡಲಿದ್ದೇವೆ. ಅವರೂ ಬಂದರೆ ಬರಲಿ ಬಿಡಿ. ಹಬ್ಬದ ಸಮಯ ಹತ್ತು ದಿನ ರಜೆ ಇರುತ್ತದೆ. ಎರಡೂ ಸಿನಿಮಾಗಳಿಗೂ ಸಮಸ್ಯೆ ಆಗುವುದಿಲ್ಲ. ಈ ಹಿಂದೆ ಇಬ್ಬರು ಸ್ಟಾರ್ ನಟರ ಸಿನಿಮಾ ಬಿಡುಗಡೆ ಆಗಿದ್ದಾಗ ಚಿತ್ರಮಂದಿರ ವಿತರಣೆ ಆಗಲಿ ಇನ್ನೊಂದಾಗಲಿ ಏನೂ ಸಮಸ್ಯೆ ಆಗಿರಲಿಲ್ಲ. ಬಹುತೇಕ ನಗರಗಳಲ್ಲಿ, ಪಟ್ಟಣಗಳಲ್ಲಿ ಎರಡೆರಡು ಚಿತ್ರಮಂದಿರ ಇದೆ. ಕೆಲವು ಕಡೆ ಸಮಸ್ಯೆ ಆಗಬಹುದು. ಆಗ ಚಿತ್ರಮಂದಿರದವರು ನಿರ್ಧಾರ ಮಾಡುತ್ತಾರೆ ಯಾವ ಸಿನಿಮಾ ಬಿಡುಗಡೆ ಮಾಡಬೇಕು ಎಂದು” ಎಂದಿದ್ದಾರೆ ಸೂರಪ್ಪ ಬಾಬು.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...