ವಿಧಾನಸಭೆ ಕಲಾಪದಲ್ಲಿ ಶರ್ಟ್ ಬಿಚ್ಚಿದ ಶಾಸಕ!

admin
0 Min Read

ವಿಧಾನಸಭೆ ಕಲಾಪದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ ಅವರನ್ನು ಒಂದು ವಾರ ಕಾಲ ಸದನದಿಂದ ಅಮಾನತುಗೊಳಿಸಿ ಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಆದೇಶ ಮಾಡಿದ್ದಾರೆ.

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೆ ಒಂದು ರಾಷ್ಟ್ರ-ಒಂದು ಚುನಾವಣೆ ಮೇಲೆ ಚರ್ಚೆ ಮಾಡಬಾರದು ಎಂದು ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಆರಂಭಿಸಿದ್ದರು. ಆಗ ಕಾಂಗ್ರೆಸ್ ಸದಸ್ಯ ಸಂಗಮೇಶ್ ಅವರು ಅಂಗಿ ಬಿಚ್ಚಿ ಪ್ರತಿಭಟನೆ ಮಾಡಿದರು.

Share This Article
Leave a Comment