ಉಪಚುನಾವಣೆಯ ನಂತರ ಕಾಂಗ್ರೆಸ್ ನ ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದರು ಆದರೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನೇ ಆ ಸ್ಥಾನ ದಲ್ಲೆ ಮುಂದುವರೆಸಬೇಕೇ ಅಥವಾ ಬೇರೆಯವರನ್ನು ನೇಮಕ ಮಾಡಬೇಕೇ ಎಂಬ ಬಗ್ಗೆಯೂ ಕೂಡ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಅವರು ಇದಕ್ಕೆ ಇನ್ನು ಪ್ರತಿಕ್ರಿಯೆ ನೀಡಿಲ್ಲ ಆದರೆ ಆ ಹುದ್ದೆಗೆ ಡಿಕೆ ಶಿವಕುಮಾರ್ ಅವರಿಗೆ ನೀಡಬೇಕೆಂದು ಕಾಂಗ್ರೆಸ್ ವಲಯದಲ್ಲಿ ಮಾತಾಗಿದೆ ಎಂದು ಹೇಳಲಾಗುತ್ತಿದೆ ಆದರೆ ಡಿ.ಕೆ.ಶಿವಕುಮಾರ್ ಅವರು ಕೂಡ ಹಲವು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ. ಇನ್ನು ಮೂರು ದಿನಗಳ ನಂತರ ದೆಹಲಿಗೆ ತೆರಳಲಿದ್ದು, ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಕಳೆದ ವಾರ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲೇ ಡಿ.ಕೆ.ಶಿವಕುಮಾರ್ ಅವರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಜನವರಿಯಲ್ಲಿ 13ರ ನಂತರ ಹೈಕಮಾಂಡ್ ಅನುಮತಿ ನೀಡಲಿದೆ. ಈ ಬಗ್ಗೆ ಡಿಕೆಶಿ ತಮ್ಮ ಆಪ್ತರೊಂದಿಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ