“ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ನಿರ್ಮಿಸಲು ಸಂಪುಟ ಒಪ್ಪಿಗೆ ಕೊಟ್ಟಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಾಮಗಾರಿ ವೆಚ್ಚವನ್ನು ನಿರ್ಧಾರ ಮಾಡಲಿದೆ” ಎಂದು ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾತನಾಡಿದರು. “ಬಸವಣ್ಣನವರು ವಚನ ಬರೆಯುವ ಮಾದರಿಯಲ್ಲಿ ಪ್ರತಿಮೆ ನಿರ್ಮಿಸಲು ಚಿಂತನೆ ಮಾಡಲಾಗಿದೆ’ ಎಂದು ಇದೇ ಸಂದರ್ಭದಲ್ಲಿ ಬೊಮ್ಮಾಯಿ ವಿವರಿಸಿದರು.
ಇದರೊಂದಿಗೆ ಇನ್ನು ಹಲವು ಆಡಳಿತಾತ್ಮಕ ನಿರ್ಣಯಗಳನ್ನು ಇಂದು ನಡೆದ ರಾಜ್ಯ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.