No menu items!
18.1 C
Munich
Friday, October 2, 2026

ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

Must read

ಬೆಂಗಳೂರು: ಬಿಜೆಪಿಯು ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಎಸ್ ಸಿ ಸಮುದಾಯದ ಛಲವಾದಿ ನಾರಾಯಣಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಸೋಶಿಯಲ್‌ ಮಿಡಿಯಾದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಛಲವಾದಿ‌ ನಾರಾಯಣಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ,
ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article