ವಿಪಕ್ಷ ನಾಯಕನ ಪಟ್ಟಕ್ಕೆ ಅಶೋಕ್- ಕಾಂಗ್ರೆಸ್ ವ್ಯಂಗ್ಯ

Date:

ಬೆಂಗಳೂರು:- ಆರ್. ಅಶೋಕ ವಿಪಕ್ಷ ನಾಯಕನಾಹಿ ನೇಮಕ ಆಗಿರುವುದಕ್ಕೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನವಾಗಿದೆ ಎಂದು ಕುಹಕವಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ಬಿಜೆಪಿ ತಂದು ಕೂರಿಸಿದೆ ಎಂದು ಆರ್. ಅಶೋಕ ಆಯ್ಕೆಗೆ ಕಾಂಗ್ರೆಸ್ ಲೇವಡಿ ಮಾಡಿದೆ. ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿದ್ದೇ ಬಿಜೆಪಿಯ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅರ್ಹತೆಯೇ? ಈ ಆಯ್ಕೆ ಕುಮಾರಸ್ವಾಮಿಯವರ ನಿರ್ದೇಶನದ ಮೇರೆಗೆ ಆಗಿದ್ದೋ, ಜೆಡಿಎಸ್ ಶಾಸಕರ ಅಭಿಪ್ರಾಯದ ಆಧಾರದಲ್ಲಿ ಆಗಿದ್ದೋ ಅಥವಾ ಬಿಜೆಪಿ ಶಾಸಕರ ಅಭಿಪ್ರಾಯದಿಂದ ಆಗಿದ್ದೋ ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.
ಅಂದಹಾಗೆ ರಾಜ್ಯ ವಿಧಾನಸಭೆ ಚುನಾವಣೆ ಮುಗಿದು ಆರು ತಿಂಗಳಾದ ಬಳಿಕ ಬಿಜೆಪಿ ತನ್ನ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಇಬ್ಬರನ್ನೂ ಆಯ್ಕೆ ಮಾಡಿದೆ. ನವೆಂಬರ್ 10ರಂದು ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕರಾಗಿ ನೇಮಕ ಮಾಡಲಾಯಿತು. ಇದಾದ ಒಂದು ವಾರದ ಬೆನ್ನಲ್ಲೇ ಆರ್. ಅಶೋಕ ಅವರನ್ನು ಆಯ್ಕೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...