No menu items!
22.4 C
Munich
Tuesday, July 28, 2026

ವಿಪರೀತ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್!

Must read

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದ್ದು, ನದಿ ತೊರೆಗಳು ಉಕ್ಕಿ ಹರಿಯುತ್ತಿವೆ. ಜೂನ್ 3ರ ನಂತರ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದ್ದು, ಈಗ ಮುಂಗಾರು ಅಬ್ಬರ ಹೆಚ್ಚಾಗಿದೆ. ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ ಜೂನ್ ಎರಡನೇ ಮತ್ತು ಮೂರನೇ ವಾರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನೂ ಕೆಲವು ದಿನ ಮಳೆ ಮುಂದುವರೆಯುವ ಸೂಚನೆ ನೀಡಲಾಗಿದೆ. ಮುಂದೆ ಓದಿ…

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಟ್ಟದಲ್ಲಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article