ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ ಐವರು ದುರ್ಮರಣ
ಮುಂಬೈ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಪತನಗೊಂಡ ಪರಿಣಾಮ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಪೈಲಟ್‌ಗಳು ಹಾಗೂ ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. ಅಜಿತ್ ಪವಾರ್ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮೂಲಗಳು ದೃಢಪಡಿಸಿವೆ.
ಅಜಿತ್ ಪವಾರ್ ಅವರು ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿಮಾನವು ತಾಂತ್ರಿಕ ದೋಷದಿಂದ ಅಥವಾ ಇಳಿಯುವಾಗ ಉಂಟಾದ ಅಡಚಣೆಯಿಂದ ಪತನಗೊಂಡಿರಬಹುದು ಎಂದು ಶಂಕಿಸಲಾಗಿದೆ. ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಈ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು ಮತ್ತು ಸುದೀರ್ಘ ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದರು.






