ವಿರಾಟ್ ಕೊಹ್ಲಿ ಮತ್ತು ಸ್ಟೀವ್​ ಸ್ಮಿತ್ ಹಿಂದಿಕ್ಕಿ ಅಗ್ರಸ್ಥಾನಕ್ಕೆ ಏರಿದ ಕೇನ್ ವಿಲಿಯಮ್ಸನ್!

admin
1 Min Read

ಐಸಿಸಿ ಪುರುಷರ ಟೆಸ್ಟ್ ಪ್ಲೇಯರ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತು ಸ್ಟೀವ್​ ಸ್ಮಿತ್​ರನ್ನು ಹಿಂದಿಕ್ಕಿದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್​ ಅಗ್ರಸ್ಥಾನಕ್ಕೇರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಐಸಿಸಿ ವಿಶ್ವ ಟೆಸ್ಟ್ ಶ್ರೇಯಾಂಕದಲ್ಲಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮತ್ತು ಭಾರತದ ವಿರಾಟ್ ಕೊಹ್ಲಿಯನ್ನು ನಾನು ಹಿಂದಿಕ್ಕುವುದು ನನಗೆ ಖುಷಿ ತಂದಿದೆ ಎಂದು ತಿಳಿಸಿದ್ದಾರೆ.

ಹಾಗು ಟೌರಂಗದಲ್ಲಿ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಕೇನ್ ಇಬ್ಬರು ಅಗ್ರ ಆಟಗಾರರನ್ನು ಹಿಂದಿಕ್ಕಿದ್ದಾರೆ. ವಿಲಿಯಮ್ಸನ್ 2015ರ ಅಂತ್ಯದ ವೇಳೆಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದರು. ಆದರೆ, ಸ್ಮಿತ್ ಅಥವಾ ಕೊಹ್ಲಿ ಇಬ್ಬರೂ ಮೊದಲ ಸ್ಥಾನದಲ್ಲಿರುತ್ತಿದ್ದರು. ಈ ವರ್ಷ ಸ್ಮಿತ್ 313 ದಿನಗಳು ಮತ್ತು ಕೊಹ್ಲಿ 51 ದಿನಗಳವರೆಗೆ ಅಗ್ರಸ್ಥಾನದಲ್ಲಿದ್ದರು ಇದೀಗ ಕೇನ್ ವಿಲಿಯಮ್ಸನ್ ಅಗ್ರಸ್ಥಾನದಲ್ಲಿದ್ದಾರೆ.

Share This Article
Leave a Comment