ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ವಿರೋಧ ಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.ವಿರೋಧ ಪಕ್ಷದವರಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಇನ್ನೇನು ಇಲ್ಲ. ಅವರು ರಚನಾತ್ಮಕ ಸಲಹೆ ಕೊಟ್ಟರೆ ನಾವು ಸ್ವೀಕರಿಸಲು ಸಿದ್ಧ.
ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಟ್ಯಾಂಕರ್ ಹಾಗೂ ಖಾಸಗಿಯವರನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡು ಮಾಫಿಯಾ ತಡೆಗಟ್ಟಿದ್ದೇವೆ. ಶೇಕಡಾ 50ರಷ್ಟು ಕೊಳವೆಬಾವಿಗಳು ಬರಿದಾಗಿದೆ. ಸಾವಿರಾರು ಟ್ಯಾಂಕರ್ ಗಳನ್ನು ನಾವು ನಿಯಂತ್ರಣಕ್ಕೆ ತೆಗೆದುಕೊಂಡು ನೀರಿನ ಮೂಲಗಳಿರುವ ಕಡೆಗಳಿಂದ ನೀರನ್ನು ಪೂರೈಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ವಿರೋಧ ಪಕ್ಷದವರಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಇನ್ನೇನು ಇಲ್ಲ !
Date:






