ವಿಶಿಷ್ಟ ದಾಖಲೆ ಬರೆದ ಶತಕವೀರ ರೋಹಿತ್ ಶರ್ಮಾ

Date:

ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ವೃತ್ತಿ ಜೀವನದ 7ನೇ ಶತಕ ಸಿಡಿಸಿದರು. ಆ ಮೂಲಕ ಕಳೆದ ಪಂದ್ಯದಲ್ಲಿ ವಿಫಲರಾಗಿದ್ದ ಹಿಟ್‌ಮ್ಯಾನ್‌ ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ನೀಡಿದರು.

ಆರಂಭಿಕರಾಗಿ ಕಣಕ್ಕೆ ಇಳಿದಿದ್ದ ಶುಭಮನ್‌ ಗಿಲ್‌ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದ ಬಳಿಕ ಚೇತೇಶ್ವರ್‌ ಪೂಜಾರ ಅವರೊಂದಿಗೆ ಅದ್ಭುತ ಬ್ಯಾಟಿಂಗ್‌ ಮಾಡಿದ ರೋಹಿತ್‌ ಶರ್ಮಾ ಮುರಿಯದ ಎರಡನೇ ವಿಕೆಟ್‌ಗೆ 85 ರನ್‌ ಜತೆಯಾಟವಾಡಿದರು. ಒಂದು ಹಂತದಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಮಾಡುತ್ತಿದ್ದ ಚೇತೇಶ್ವರ್‌ ಪೂಜಾರ 21 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು.

ಆರಂಭದಿಂದಲೂ ಬಿರುಸಿನ ಬ್ಯಾಟಿಂಗ್‌ ಮಾಡಿದ್ದ ರೋಹಿತ್‌ ಶರ್ಮಾ ಕೇವಲ 47 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ನಂತರ ಅದೇ ಆಟವನ್ನೇ ಮುಂದುವರಿಸಿ ರೋಹಿತ್‌, 130 ಎಸೆತಗಳಲ್ಲಿ ವೃತ್ತಿ ಜೀವನದ ಏಳನೇ ಬಾರಿ ಮೂರಂಕಿ ಮೊತ್ತ ದಾಖಲಿಸಿದರು.

ಇಂಗ್ಲೆಂಡ್‌ ವಿರುದ್ಧ ಟೆಸ್ಟ್, ಓಡಿಐ ಹಾಗೂ ಟಿ20 ಸ್ವರೂಪದಲ್ಲಿ ಶತಕ ಸಿಡಿಸಿದ ಎರಡನೇ ಬ್ಯಾಟ್ಸ್‌ಮನ್‌ ಎಂಬ ಖ್ಯಾತಿಗೆ ರೋಹಿತ್‌ ಶರ್ಮಾ ಭಾಜನರಾದರು.ಇದಕ್ಕೂ ಮುನ್ನ ವೆಸ್ಟ್ ಇಂಡೀಸ್‌ನ ದೈತ್ಯ ಬ್ಯಾಟ್ಸ್‌ಮನ್ ಕ್ರಿಸ್‌ ಗೇಲ್‌ ಈ ದಾಖಲೆ ಮಾಡಿದ ಮೊದಲನೇ ಬ್ಯಾಟ್ಸ್‌ಮನ್‌ ಆಗಿದ್ದರು. ಇದೀಗ ಈ ಸಾಲಿಗೆ ಹಿಟ್‌ಮ್ಯಾನ್‌ ಭಾಜನರಾದರು.

ಟೆಸ್ಟ್‌ ಸರಣಿಯ ಆರಂಭಿಕ ಪಂದ್ಯದಲ್ಲಿ ರೋಹಿತ್‌ ಶರ್ಮಾ ಎರಡಂಕಿ ವೈಯಕ್ತಿಕ ಮೊತ್ತ ದಾಖಲಿಸುವಲ್ಲಿ ವಿಫಲರಾಗಿದ್ದರು. ಆದರೆ, ಎರಡನೇ ಪಂದ್ಯದಲ್ಲಿ ಮಾನಸಿಕವಾಗಿ ಬಲಿಷ್ಠವಾಗಿ ಕಣಕ್ಕೆ ಇಳಿದಿದ್ದ ರೋಹಿತ್‌, ಇಂಗ್ಲೆಂಡ್‌ನ ಮಾರಕ ದಾಳಿಯನ್ನು ಎದುರಿಸುವಲ್ಲಿ ಸಫಲರಾದರು.

ಇದಕ್ಕೂ ಮುನ್ನ ಶುಭಮನ್‌ ಗಿಲ್‌ ಹಾಗೂ ಚೇತೇಶ್ವರ್ ಪೂಜಾರ ವಿಕೆಟ್‌ ನೀಡಿದ ಬಳಿಕ, ಟೀಮ್ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಶೂನ್ಯಕ್ಕೆ ಮೊಯಿನ್‌ ಅಲಿಗೆ ಕ್ಲೀನ್‌ ಬೌಲ್ಡ್ ಆಗಿದ್ದರು.

ಒಂದು ಹಂತದಲ್ಲಿ 57 ಓವರ್‌ಗಳ ಮುಕ್ತಾಯಕ್ಕೆ ಭಾರತ ತಂಡ ಪ್ರಥಮ ಇನಿಂಗ್ಸ್‌ನಲ್ಲಿ ಮೂರು ವಿಕೆಟ್‌ಗಳ ನಷ್ಟಕ್ಕೆ 192 ರನ್‌ ಗಳಿಸಿದ್ದು, ಕ್ರೀಸ್‌ನಲ್ಲಿ ರೋಹಿತ್‌ ಶರ್ಮಾ(134*) ಹಾಗೂ ಅಜಿಂಕ್ಯ ರಹಾನೆ(37*) ಇದ್ದರು.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...