ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ಹಣ ಪಡೆದು ವಂಚನೆ

Date:

ಬೆಂಗಳೂರು: ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ಹಣ ಪಡೆದು ವಂಚನೆ ಮಾಡಿರುವ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಆರೋಪ ಕೇಳಿಬಂದಿದೆ. ಸುರೇಂದ್ರ ಮೂರ್ತಿ ಎಂಬುವವರು ವಿಶೇಷ ಚೇತನ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ. ಸುರೇಂದ್ರ ಮೂರ್ತಿ ಹಾಗೂ ವಿಶೇಷ ಚೇತನ ಯುವತಿಗೆ ಮೊದಲು ಪರಿಚಯವಾಗಿ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರಲ್ಲಿ ಸಲುಗೆ, ನಂಬಿಕೆ ಹೆಚ್ಚಾದ ಬಳಿಕ ಸುರೇಂದ್ರ ಮೂರ್ತಿ ತನ್ನೊಂದು ಬ್ಯುಸಿನೆಸ್ ಮಾಡಬೇಕಿದೆ. ಅದಕ್ಕೆ ಹಣ ಬೇಕೆಂದು ಯುವತಿ ಬಳಿ ಕೇಳಿದ್ದ. ತನ್ನ ಪ್ರಿಯತಮನಿಗಾಗಿ ಯುವತಿ ಸಾಲ ಮಾಡಿ,
ತನ್ನ ಬಳಿಯಿದ್ದ ಚಿನ್ನ ಅಡವಿಟ್ಟು ಹಣ ನೀಡಿದ್ದರು. ಆದರೆ ಹಣವೆಲ್ಲ ಪಡೆದ ಬಳಿಕ ಮದುವೆಯಾಗದೆ ವಂಚನೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಅಲ್ಲದೆ ಪ್ರೀತಿಯಲ್ಲಿದ್ದ ವೇಳೆ ಲೈಂಗಿಕವಾಗಿಯೂ ಬಳಸಿಕೊಂಡಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ. ಸದ್ಯ ವಿಶೇಷ ಚೇತನ ಯುವತಿ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಘಟನೆ ಸಂಬಂಧ ಫೆಬ್ರವರಿ ತಿಂಗಳಲ್ಲಿ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೃತ್ಯ ನಡೆದದ್ದು ಕೊಡಿಗೆಹಳ್ಳಿ ಹಿನ್ನಲೆ ಇದೀಗ ಪ್ರಕರಣ ಕೊಡಿಗೆಹಳ್ಳಿ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...