3ನೇ ಬಾರಿ ಏಕದಿನ ವಿಶ್ವಕಪ್ ಗೆಲ್ಲಲು ರೆಡಿಯಾಗಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾಕ್ಕೆ ಬಿಗ್ ಶಾಕ್ ಎದುರಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಆರಂಭಿಕ ಆಟಗಾರ ಗಬ್ಬರ್ ಖ್ಯಾತಿಯ ಶಿಖರ್ ಧವನ್ ವಿಶ್ವಕಪ್ ಟೂರ್ನಿಯಿಂದ ಹೊರ ನಡೆಯುವ ಆತಂಕದ ಸ್ಥಿತಿ ನಿರ್ಮಾಣವಾಗಿದೆ.
ಈಗಾಗಲೇ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಭಾರತ 3ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಅನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಶಿಖರ್ ಧವನ್ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ. ಶಿಖರ್ ಧವನ್ ಅವರು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಇದರಿಂದ ಅವರು ಗುರುವಾರ ಟ್ರೆಂಟ್ಬ್ರಿಡ್ಜ್ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆಡುವುದು ಅನುಮಾನ ಎಂದು ತಿಳಿದುಬಂದಿದೆ. ಗಾಯದ ಸಮಸ್ಯೆ ಹೆಚ್ಚಾಗಿದ್ದು, ನೋವು ಹೆಚ್ಚಾಗುತ್ತಿದ್ದು ಧವನ್ ಗೆ ಕನಿಷ್ಠ ಮೂರು ವಾರಗಳ ವಿಶ್ರಾಂತಿ ಅಗತ್ಯ ಎಂದು ಹೇಳಲಾಗುತ್ತಿದೆ. ಆದ್ದರಿಂದ ಅವರು ವಿಶ್ವಕಪ್ನಿಂದಲೇ ಹೊರ ಉಳಿಯಬೇಕಾದ ಆತಂಕ ಎದುರಾಗಿದೆ.
ಒಂದು ವೇಳೆ ಶಿಖರ್ ಧವನ್ ತಂಡದಿಂದ ಹೊರಗುಳಿದರೆ ಭಾರತಕ್ಕೆ ದೊಡ್ಡ ಹೊಡೆತ ಬೀಳುವುದು ಗ್ಯಾರೆಂಟಿ. ಆದರೆ, ಧವನ್ ಟೂರ್ನಿಯಿಂದ ಹೊರಗುಳಿದಲ್ಲಿ ರಿಷಭ್ ಪಂತ್ ಅವರಿಗೆ ಇಂಗ್ಲೆಂಡ್ಗೆ ಹೋಗಲು ಬುಲಾವ್ ಬರೋ ಸಾಧ್ಯತೆ ಇದೆ. ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ಓಪನರ್ ಜವಬ್ದಾರಿ ನೀಡಿದರೂ ನೀಡಬಹುದು.
ವಿಶ್ವಕಪ್ ಗೆಲ್ಲೋಕೆ ರೆಡಿಯಾಗಿರೋ ಟೀಮ್ ಇಂಡಿಯಾಕ್ಕೆ ಬಿಗ್ ಶಾಕ್..!
Date: