ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ: ಪ್ರಧಾನಿ ಮೋದಿ
ಆಂಧ್ರಪ್ರದೇಶ: ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೇಶದ ಜನತೆಗೆ ಯೋಗ ದಿನಾಚರಣೆಯ ಶುಭಾಶಯ ತಿಳಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದು 175 ದೇಶಗಳು ಯೋಗ ದಿನ ಆಚರಣೆ ಮಾಡುತ್ತಿವೆ. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಲು ಯೋಗ ನೆರವಾಗಲಿದೆ. ಯೋಗ ಎಂದರೆ ಎಲ್ಲರೂ ಒಂದಾಗುವುದು ಎಂದರ್ಥ. ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಮನುಷ್ಯ ಶಿಸ್ತುಬದ್ಧ ಜೀವನ ನಡೆಸಲು ಯೋಗ ಸಹಕಾರಿಯಾಗಲಿದೆ ಎಂದರು. ಮಾನವೀಯತೆ, ಶಾಂತಿ, ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ನೆರವಾಗಲಿದೆ. ಯೋಗ ಹಲವು ದೇಶಗಳ ಜೊತೆ ಬಾಂಧವ್ಯ ವೃದ್ಧಿಗೆ ನೆರವಾಗಿದೆ. ನೌಕಾಪಡೆ ಸಿಬ್ಬಂದಿ ನೌಕೆಯಲ್ಲೇ ಯೋಗಾಸನ ಮಾಡುತ್ತಿದ್ದಾರೆ. ಪ್ರತಿಯೊಬ್ಬರೂ ಕೂಡ ಯೋಗಾಸನ ಮಾಡಬೇಕು ಎಂದು ಹೇಳಿದರು.