No menu items!
9.3 C
Munich
Wednesday, April 29, 2026

ವಿಶ್ವಾದ್ಯಂತ ‘ಯಜಮಾನ’ನ ಹವಾ ಶುರು

Must read

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಯಜಮಾನ’ ಚಿತ್ರ ಇಂದು ವಿಶ್ವಾದ್ಯಂತ ಬಿಡುಗಡೆ ಆಗಿದೆ. ಪ್ರೇಕ್ಷಕರು ಯಜಮಾನನ್ನು 18 ತಿಂಗಳ ಬಳಿಕ ಭರ್ಜರಿ ಸ್ವಾಗತ ಮಾಡಿದ್ದಾರೆ.

ಇಂದು ಬೆಳಗ್ಗೆ 6 ಗಂಟೆಗೆ ಚಿತ್ರ ಬಿಡುಗಡೆ ಆಗಿದೆ. ಮುಖ್ಯ ಚಿತ್ರಮಂದಿರ ನರ್ತಕಿಯಲ್ಲಿ ಅಭಿಮಾನಿಗಳು ಜಮಾಯಿದ್ದು, ಬಹುತೇಕ ಎಲ್ಲಾ ಶೋ ಟಿಕೆಟ್ ಸೋಲ್ಡೌಟ್ ಆಗಿದೆ. ಚಿತ್ರಮಂದಿರದ ಹೊರಗೆ ದರ್ಶನ್ ಅವರ 80 ಅಡಿ ಕಟೌಟ್ ನಿಲ್ಲಿಸಲಾಗಿದೆ.

ದರ್ಶನ್ ಅವರ 80 ಅಡಿ ಎತ್ತರದ ಕಟೌಟ್‍ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಕಟೌಟ್ ಜೊತೆಗೆ ಮೊದಲ ಬಾರಿಗೆ ದರ್ಶನ್ ಪುತ್ರ ವಿನೀಶ್ ಕಟೌಟನ್ನು ಕೂಡ ಹಾಕಲಾಗಿದ್ದು, ಆ ಕಟೌಟ್ ಸುಮಾರು 30 ಅಡಿ ಎತ್ತರದಲ್ಲಿದೆ.

ದರ್ಶನ್ ಅವರ ಯಜಮಾನ ಚಿತ್ರದಲ್ಲಿ ಅವರ ಮಗ ವಿನೀಶ್ ಅವರು ಒಂದು ವಿಶೇಷ ಹಾಡಿನಲ್ಲಿ ನಟಿಸಿದ್ದಾರೆ. ಈ ಹಾಡಿನಲ್ಲಿ ಅಪ್ಪ ಮಗ ಒಟ್ಟಿಗೆ ಹೆಜ್ಜೆ ಹಾಕಿದ್ದಾರೆ. `ಐರಾವತ’ ಚಿತ್ರದ ನಂತರ ಯಜಮಾನ ಚಿತ್ರದಲ್ಲಿ ದರ್ಶನ್ ಹಾಗೂ ವಿನೀಶ್ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ.

ದರ್ಶನ್‍ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ಮಿಂಚಿದ್ದಾರೆ. ಡೈನಾಮಿಕ್ ಸ್ಟಾರ್ ದೇವರಾಜ್, ರವಿಶಂಕರ್, ಡಾಲಿ ಧನಂಜಯ್, ದತ್ತಣ್ಣ, ಶಿವರಾಜ್. ಕೆ.ಆರ್ ಪೇಟೆ, ಸಾಧುಕೋಕಿಲ ಸೇರಿದಂತೆ ಅತಿ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿ ತುಂಬಿದೆ.

ಈ ಚಿತ್ರವನ್ನು ಪೋನ್‍ಕುಮಾರ್ ಹಾಗೂ ವಿ. ಹರಿಕೃಷ್ಣ ಜಂಟಿಯಾಗಿ ನಿರ್ದೇಶಿಸಿದ್ದಾರೆ. ಸಂಗೀತ ನಿರ್ದೇಶಕರಾಗಿ ಬಜಾರ್‍ನಲ್ಲಿ ಮಿನುಗುತ್ತಿರುವ ಹರಿಕೃಷ್ಣ, ಯಜಮಾನನಿಗಾಗಿ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿದ್ದಾರೆ. ಈ ಚಿತ್ರವನ್ನು ಶೈಲಜಾ ನಾಗ್ ಹಾಗೂ ಬಿ. ಸುರೇಶ್ ನಿರ್ಮಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article