ಎದೆನೋವಿನಿಂದ ಬಳಲುತ್ತಿರುವ ನಾಗೇಂದ್ರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ ಆಪರೇಷನ್ ಇರುವುದರಿಂದ ಸಿಎಂ ಕುಮಾರಸ್ವಾಮಿ ನಾಳೆ 11 ಗಂಟೆಗೆ ವಿಶ್ವಾಸಮತ ಯಾಚನೆ ವೇಳೆ ಸದನಕ್ಕೆ ಆಗಮಿಸಲು ಸಾಧ್ಯವಿಲ್ಲ ಎಂದು ನಾಗೇಂದ್ರ ತಿಳಿಸಿದ್ದಾರೆ.
ಸೋಮವಾರ ಸಿಎಂ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ನಾಗೇಂದ್ರ ಅವರ ಆರೋಗ್ಯ ವಿಚಾರಿಸಿದ್ದರು. ಈ ವೇಳೆ ವಿಶ್ವಾಸ ಮತಯಾಚನೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿಕೊಂಡಿದ್ದರು.