ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ “ಕ್ಯಾನ್ ವಾಕ್” ಜಾಗೃತಿ ನಡಿಗೆಗೆ ಸಹಸ್ರಾರು ಜನರ ಸ್ಪಂದನೆ !

Date:

ಬೆಂಗಳೂರು: ನಿಯಮಿತ ವ್ಯಾಯಾಮ, ಪೌಷ್ಠಿಕಾಂಶಯುಕ್ತ ಆಹಾರ ಸೇವನೆ ಸೇರಿದಂತೆ ಆರೋಗ್ಯಪೂರ್ಣ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಮೂಲಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಆರೋಗ್ಯ ಇಲಾಖೆ ಹಾಗೂ ಸರ್ಜಿಕಲ್ ಸೊಸೈಟಿ ಆಫ್ ಬೆಂಗಳೂರು, ಜೆಎಸ್ ಕ್ಯಾನ್ಸರ್ ಫೌಂಡೇಶನ್, ನವೋದಯ ಇನ್ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕ್ಯಾನ್ ವಾಕ್’ ಜಾಗೃತಿ ನಡಿಗೆ ಕಾರ್ಯಕ್ರಮಕ್ಕೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ನಂತರ ಮಾತನಾಡಿದರು.
ನಿಯಮಿತ ವ್ಯಾಯಾಮ, ಪೌಷ್ಠಿಕಾಂಶಯುಕ್ತ ಆಹಾರ ಸೇವನೆ ಸೇರಿದಂತೆ ಆರೋಗ್ಯಪೂರ್ಣ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಮೂಲಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು. ಆರಂಭಿಕ ಹಂತದಲ್ಲೇ ಕ್ಯಾನ್ಸರ್ ಅನ್ನು ಪತ್ತೆ ಮಾಡುವ ಮೂಲಕ ಅಮೂಲ್ಯ ಜೀವವನ್ನು ಉಳಿಸಬಹುದಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತಿದೆ. ಜನರು ಕ್ಯಾನ್ಸರ್ ವಿಚಾರದಲ್ಲಿ ಹೆಚ್ಚಿನ ಜಾಗೃತಿ ವಹಿಸುವ ಅಗತ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
“ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಕೈ ಜೋಡಿಸಿ” ಘೋಷವಾಕ್ಯದಡಿಯಲ್ಲಿ 5 ಕಿಲೋಮೀಟರ್ ನರೆಗೆ ವಾಕಥಾನ್ ನಡೆಸಲಾಯಿತು. ನಡಿಗೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರ ಜೊತೆ ನಟ ಪ್ರೇಮ್, ಅಭಿಜಿತ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಎನ್.ಎಚ್.ಎಮ್ ಎಂ.ಡಿ ನವೀವ್ ಭಟ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹೆಜ್ಜೆ ಹಾಕಿದರು. ಮುಂಜಾನೆಯೇ 10 ಸಾವಿರಕ್ಕೂ ಹೆಚ್ಚು ಜನರು ಕ್ಯಾನ್ಸರ್ ಜಾಗೃತಿ ನಡಿಗೆಯಲ್ಲಿ ಪಾಲ್ಗೊಂಡು, ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಒಂದಾಗೋಣ ಎಂಬ ಘೋಷವಾಖ್ಯಗಳನ್ನ ಮೊಳಗಿಸಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...