ವಿಶ್ವ ಚಾಂಪಿಯನ್ಶಿಪ್ ನೋಡಲು ಗಂಗೂಲಿಗಿಲ್ಲ ಚಾನ್ಸ್!

Date:

ಟೀಮ್ ಇಂಡಿಯಾ ಜೂನ್ 3ರಂದು ಇಂಗ್ಲೆಂಡ್‌ನ ಸೌತಾಂಪ್ಟನ್ ತಲುಪಲಿದ್ದು ಜೂನ್ 18ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್‌ನಲ್ಲಿಯೇ ಉಳಿದುಕೊಳ್ಳಲಿರುವ ಟೀಮ್ ಇಂಡಿಯಾ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.

ಜೂನ್ 18ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಇನ್ನು ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಆಟಗಾರರ ಜೊತೆ ತಂಡದ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರು ಸಹ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಬಹುದು ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿತ್ತು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾಗೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಅನುಮತಿ ಸಿಕ್ಕಿಲ್ಲ.

ಹೌದು ಇಂಗ್ಲೆಂಡ್ ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದ ಪ್ರಕಾರ ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಇಂಗ್ಲೆಂಡ್‌ಗೆ ತೆರಳಿ ಪಂದ್ಯ ವೀಕ್ಷಿಸಬೇಕೆಂದರೆ ಹತ್ತು ದಿನಗಳ ಕಾಲ ಕಠಿಣ ಕ್ವಾರಂಟೈನ್ ನಿಯಮವನ್ನು ಅನುಸರಿಸಬೇಕಾಗಬಹುದು, ಅಷ್ಟೇ ಅಲ್ಲದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಗಂಗೂಲಿ ಮತ್ತು ಜಯ್ ಶಾಗೆ ಇನ್ನೂ ಅನುಮತಿಯನ್ನು ನೀಡಿಲ್ಲ. ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದಿಂದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗುತ್ತಿದೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...