ವಿಷ ಪ್ರಾಶನದಿಂದ 5 ಹುಲಿಗಳ ಸಾವು: ಕೊನೆಗೂ ಮೂವರು ವಶಕ್ಕೆ, ಚುರುಕುಗೊಂಡ ತನಿಖೆ
ಚಾಮರಾಜನಗರ: ಹುಲಿಗಳ ನಾಡೆಂದೇ ಪ್ರಖ್ಯಾತಿಯಾದ ಚಾಮರಾಜನಗರ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಮಿಣ್ಯಂ ಅರಣ್ಯದಲ್ಲಿ ಹುಲಿಗಳು ಮೃತಪಟ್ಟಿರುವುದು ಕಂಡುಬಂದಿದ್ದು, ಒಂದೇ ದಿನ ಐದು ಹುಲಿಗಳು ಸಾವನ್ನಪ್ಪಿರುವ ದುರಂತ ದೇಶದಲ್ಲೇ ಮೊದಲು. ಇನ್ನು ಸಾವಿಗೆ ಕಾರಣವಾದ ಪ್ರಕರಣದಲ್ಲಿ ಮೂವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಹಸುವನ್ನು ಹುಲಿ ಕೊಂದಿದ್ದಕ್ಕೆ ಪ್ರತೀಕಾರವಾಗಿ ವಿಷ ಹಾಕಿದ್ದಾಗಿ ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಸದ್ಯ ಪೊಲೀಸರು ಆರೋಪಿಗಳನ್ನು ದೃಢಪಡಿಸಿದ್ದು, ವಿಚಾರಣೆ ನಡೆಸಿದ್ದಾರೆ. ಮಾದ ಅಲಿಯಾಸ್ ಮಾದುರಾಜು, ನಾಗರಾಜ್ ಮತ್ತು ಕೂನಪ್ಪ ಬಂಧಿತರು. ಸದ್ಯ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗಳಿಂದ ವಿಚಾರಣೆ ನಡಲಾಗುತ್ತಿದೆ. ಮಾದ ಅಲಿಯಾಸ್ ಮಾದುರಾಜುಗೆ ಸೇರಿದ್ದ ಕೆಂಚಿ ಎಂಬ ಹೆಸರಿನ ಹಸುವನ್ನು ಹುಲಿ ಬಲಿ ಪಡೆದಿತ್ತು. ತನ್ನ ನೋವನ್ನು ನಾಗರಾಜ್ ಬಳಿ ಹೇಳಿಕೊಂಡು ಮಾದ ಕಣ್ಣೀರಿಟ್ಟಿದ್ದ. ಬಳಿಕ ಹಸು ಕೊಂದ ಹುಲಿ ಕೊಲ್ಲಲು ಇಬ್ಬರು ನಿರ್ಧರಿಸಿದ್ದರು. ಹಾಗಾಗಿ ಹುಲಿ ಕೊಲ್ಲಲು ಕ್ರಿಮಿನಾಶಕ ಕೂಡ ತಂದಿದ್ದರು. ಹುಲಿಗಳನ್ನು ಕೊಲ್ಲಲು ಸಂಚು ರೂಪಿಸಿದ್ದ ಆರೋಪಿಗಳಿಗೆ ಕೂನಪ್ಪ ನೆರವು ನೀಡಿದ್ದರು. ನಾಗರಾಜ್ ಮೃತ ಹಸುವಿಗೆ ಕ್ರಿಮಿನಾಶಕ ಹಾಕಿ ಬಂದಿದ್ದ. ಮರುದಿನ ವಿಷಪೂರಿತ ಹಸುವಿನ ಮಾಂಸ ತಿಂದು ಹುಲಿ ಮರಿಗಳು ಸತ್ತಿದ್ದವು. ಸದ್ಯಕ್ಕೆ ಹುಲಿ ಅಂತ್ಯ ಸ್ಥಳದಲ್ಲೇ ಅಂತಿಮ ಸಂಸ್ಕಾರ ಮಾಡಲಾಗಿದೆ.