ವೀಕೆಂಡ್ ಕರ್ಫ್ಯೂ ಅಂತ್ಯ: ಆದರೆ ಮತ್ತಷ್ಟು ಕಠಿಣ ನಿಯಮಕ್ಕೆ ತಯಾರಾಗಿ!

Date:

ರಾಜ್ಯದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು.

ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಲಿದ್ದು, ಸಚಿವರಾದ ಆರ್.ಅಶೋಕ್, ಡಾ.ಕೆ. ಸುಧಾಕರ್, ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಕೊರೋನಾ ತಡೆಗೆ ರಾಜ್ಯದಲ್ಲಿ ಸದ್ಯ ವಿಧಿಸಲಾಗಿರುವ ಕಠಿಣ ನಿಯಮಗಳು ಜನವರಿ 19 ಕ್ಕೆ ಅಂತ್ಯವಾಗಲಿವೆ. ಜನವರಿ 31 ರ ವರೆಗೆ ಅನೇಕ ನಿಯಮಗಳು ಮುಂದುವರೆಯಲಿವೆ. ಜ. 17 ರ ಇಂದು ಬೆಳಗ್ಗೆ 5 ಗಂಟೆಗೆ ವೀಕೆಂಡ್ ಕರ್ಫ್ಯೂ ಕೂಡ ಮುಕ್ತಾಯವಾಗಿದೆ.

ಸಭೆಯಲ್ಲಿ ವೀಕೆಂಡ್ ಕರ್ಫ್ಯೂ, ಕಠಿಣ ನಿಯಮಗಳನ್ನು ಮುಂದುವರೆಸುವ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ಅಲ್ಲದೆ, ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ನಿರ್ಬಂಧ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...