ವೀರ ಮದಕರಿ ನಾಯಕನಿಗಾಗಿ ಸುದೀಪ್​-ದರ್ಶನ್​ ವಾರ್​..!

Date:

ವೀರ ಮದಕರಿ ನಾಯಕನ ಸಿನಿಮಾ ಟೈಟಲ್​ ವಿಚಾರ ಈಗ ಕನ್ನಡ ಚಿತ್ರರಂಗದ ಇಬ್ಬರು ಸ್ಟಾರ್​ ನಟರ ನಡುವೆ ವಿವಾದವನ್ನೇ ಎಬ್ಬಿಸಿದೆ. ಯಾಕಂದ್ರೆ, ಇತ್ತೀಚೆಗಷ್ಟೇ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್​ ನೇತೃತ್ವದಲ್ಲಿ ವೀರ ಮದಕರಿ ನಾಯಕ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ಕಿಚ್ಚ ಸುದೀಪ್​ ಬೇಸರಗೊಂಡಿದ್ದಾರೆ. ಕಾರಣ ಇಷ್ಟೇ, ಈಗಾಗ್ಲೆ ಸುದೀಪ್​ ಅವರು ವೀರ ಮದಕರಿ ನಾಯಕನ ಕುರಿತು ಸಿನಿಮಾ ಮಾಡೋಕೆ ಕಳೆದ ಎರಡು ವರ್ಷಗಳಿಂದ ಅಧ್ಯಯನ ನಡೆಸಿದ್ದರು. ಆ ಚಿತ್ರದಲ್ಲಿ ಸ್ವತಃ ಸುದೀಪ್ ನಟಿಸಿ ಅವರೇ ನಿರ್ದೇಶನ ಮಾಡಲು ಬಯಸಿದ್ದರು. ಆದರೆ ಈಗ ದರ್ಶನ್​ ಆ ಚಿತ್ರವನ್ನ ಮಾಡಲು ಹೊರಟಿರುವುದು ಸುದೀಪ್​ ಅವರನ್ನ ಕೊಂಚ ಬೇಸರಕ್ಕೀಡು ಮಾಡಿದೆ. ಈ ಬಗ್ಗೆ ಸ್ವತಃ ಸುದೀಪ್ ಅವರೇ ತಮ್ಮ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ವೀರ ಮದಕರಿ ಬಗ್ಗೆ ಸುದೀಪ್ ಅಭಿಪ್ರಾಯ: ನಾನು ನನ್ನ ತಂಡ ಹಾಗೂ ಕೆಲವು ಲೇಖಕರ ಬಳಗವು ಈಗ್ಗೆ ಒಂದು–ಒಂದೂವರೆ ವರ್ಷದಿಂದ ‘ವೀರ ಮದಕರಿ ನಾಯಕ‘ ಸಿನಿಮಾ ನಿರ್ಮಾಣದ ದಿಸೆಯಲ್ಲಿ ಕೆಲಸ ಮಾಡುತ್ತಿದೇವೆ. ಈಗಾಗಲೇ ಒಂದಷ್ಟು ಸಂಶೋಧನೆ ಮತ್ತೂ ಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ. ವೀರ ಮದಕರಿ ಸಿನಿಮಾ ಮಾಡುವ ನಮ್ಮ ಆಲೋಚನೆ ವರ್ಷಗಳ ಹಿಂದೆಯೇ ಹುಟ್ಟಿದಂತಹುದು. ಆದರೆ, ಈ ದಿಸೆಯಲ್ಲಿ ಕೆಲಸ ಮಾಡಲು ಒಂದಷ್ಟು ಸಮಯ ಬೇಕಾಯಿತು. ಹೀಗಾಗಿ ಈ ಸಿನಿಮಾ ನಿರ್ದೇಶನ ಕೂಡ ಮಾಡುವ ಸ್ಫೂರ್ತಿ ಚಿಗುರೊಡೆಸಿತ್ತು. ಇತ್ತೀಚೆಗೆ ಇದೇ ಕಥೆಯ ಆಧಾರಿತ ಮತ್ತೊಂದು ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ ಎಂಬ ಸುದ್ದಿ ನನಗೆ ನಿಜಕ್ಕೂ ಆಶ್ಚರ್ಯ ಉಂಟು ಮಾಡಿತು. ಸಹಜವಾಗಿಯೇ ನನಗೆ ಇದರಲ್ಲಿ ಏನಿದೆ ಎಂಬ ಪ್ರಶ್ನೆ ಹುಟ್ಟು ಹಾಕಿತು. ಯಾರೇ ಆಗಲಿ, ಇತಿಹಾಸದ ವಿಷಯಗಳ ಮೇಲೆ ಸಿನಿಮಾ ನಿರ್ಮಿಸಲು ಅರ್ಹರಿದ್ದಾರೆ. ಒಂದೇ ವಿಷಯ, ಒಬ್ಬನೇ ವ್ಯಕ್ತಿಯ ಮೇಲೆ ಈಗಾಗಲೇ ಒಂದಕ್ಕಿಂತ ಹೆಚ್ಚು ಸಿನಿಮಾಗಳು ತೆರೆಕಂಡ ಉದಾಹರಣೆಗಳಿವೆ. ನಾನೊಬ್ಬನೇ ಮದಕರಿ ನಾಯಕನ ಪಾತ್ರ ನಿರ್ವಹಿಸಬೇಕು ಎಂಬುದು ಎಷ್ಟು ಸರಿ? ಆತ ಕರ್ನಾಟಕದ ವೀರಪುತ್ರ. ಅವರ ಬಗ್ಗೆ ಸಿನೆಮಾ ಯಾರಾದರೂ ಮಾಡಬಹುದು. ರಾಕ್‌ಲೈನ್‌ ವೆಂಕಟೇಶ್‌ ಅವರ ಸಿನಿಮಾ ಆಸಕ್ತಿ ಅದ್ವಿತೀಯವಾದದ್ದು. ಇದನ್ನೊಂದು ಅತ್ಯುತ್ತಮ ಚಿತ್ರವಾಗಿ ತೆರೆಯ ಮೇಲೆ ತರುತ್ತಾರೆ ಎಂಬುದಕ್ಕೆ ಅನುಮಾನವೇ ಇಲ್ಲ. ರಾಜೇಂದ್ರ ಸಿಂಗ್‌ ಬಾಬು ಅವರ ಅನುಭವ ಕೂಡ ಇದರಲ್ಲಿ ಸಮ್ಮಿಲನವಾಗಿದೆ. ಆದರೆ, ನಾನು ಮತ್ತು ನನ್ನ ತಂಡವು ಮಾಡ ಹೊರಟಿರುವ ಚಿತ್ರಕ್ಕೆ ಇದು ಅಡ್ಡಿಯಾಗುವುದಿಲ್ಲ. ಇದು ನಮ್ಮ ಕನಸೂ ಕೂಡ. ಇದು ಬರೀ ನನ್ನೊಬ್ಬನ ಕನಸಲ್ಲ. ಇಡೀ ತಂಡದ ಕನಸನ್ನು ನಾನು ಭಗ್ನಗೊಳಿಸಲು ಇಚ್ಛಿಸುವುದಿಲ್ಲ. ಇದರ ಬದಲಿಗೆ ಮಾಡಿ ಮಡಿಯುವುದೇ ಮೇಲು. ನಾನೂ ಒಬ್ಬ ಮದಕರಿ. ರಾಕ್‌ಲೈನ್‌ ಅವರ ತಂಡವನ್ನು ನಾನು ಇಂತಹ ಒಳ್ಳೆಯ ಕರ್ನಾಟಕದ ನೆಲದ ಕಥೆಯನ್ನು ಆಯ್ಕೆ ಮಾಡಿರುವುದಕ್ಕೆ ಅಭಿನಂದಿಸುತ್ತೇನೆ. ಅವರಿಗೆ ನನ್ನ ಶುಭಾಶಯಗಳು. ಅದೇ ರೀತಿಯಾಗಿ ನನ್ನ ನಿರ್ಣಯವನ್ನು ನೀವೆಲ್ಲರೂ ಸಮ್ಮತಿಸುತ್ತೀರೆಂದು ನಂಬಿರುವೆ.
ನಿಮ್ಮವ, ಕಿಚ್ಚ

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...