ವೃದ್ದೆ ಜೀವ ಉಳಿಸಲು ಹೋಗಿ ತನ್ನ ಪ್ರಾಣ ಅರ್ಪಿಸಿದ ಯಕೃತ್ ದಾನಿ ಮಹಿಳೆ!

Date:

ವೃದ್ದೆ ಜೀವ ಉಳಿಸಲು ಹೋಗಿ ತನ್ನ ಪ್ರಾಣ ಅರ್ಪಿಸಿದ ಯಕೃತ್ ದಾನಿ ಮಹಿಳೆ!

ಉಡುಪಿ:- ವೃದ್ದೆ ಜೀವ ಉಳಿಸಲು ಹೋಗಿ ಮಹಿಳೆಯೋರ್ವರು ತನ್ನ ಪ್ರಾಣ ಅರ್ಪಿಸಿದ ಘಟನೆ ಜರುಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ಘಟನೆ ಜರುಗಿದೆ.

ಅರ್ಚನಾ ಕಾಮತ್ ಮೃತಪಟ್ಟವರು. 69 ವರ್ಷ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದ 34 ವರ್ಷದ ಅರ್ಚನಾ ಕಾಮತ್ ಅವರು ಯಕೃತ್ ದಾನ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸೋಂಕಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ.

ಸದಾ ಸಮಾಜಮುಖಿ ಚಿಂತನೆಯೊಂದಿಗೆ ಸಕ್ರಿಯವಾಗಿದ್ದ ಅರ್ಚನಾ ಕಾಮತ್ ಅವರು ನಗರದ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದರು. ತಮ್ಮ ಯಕೃತ್‌ನ ಒಂದು ಭಾಗವನ್ನು ಪತಿಯ ಸಂಬಂಧಿಗೆ ದಾನ ಮಾಡಿ ಇಹಲೋಕ ತ್ಯಜಿಸಿದ್ದಾರೆ. ಅಕಾಲಿಕ ನಿಧನದಿಂದ ಅರ್ಚನಾ ಅವರ ಸಂಬಂಧಿಕರು, ಆತ್ಮೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...