ವೇಗವಾಗಿ ಬರುತ್ತಿದ್ದ ಬೊಲೆರೊ ವಾಹನ ಸ್ಕೂಟರ್ ಗೆ ಡಿಕ್ಕಿ: ಮಹಿಳೆ ಸಾವು, ಇಬ್ಬರು ಮಕ್ಕಳಿಗೆ ಗಾಯ.
ಮಂಡ್ಯ: ವೇಗವಾಗಿ ಬರುತ್ತಿದ್ದ ಬೊಲೆರೊ ವಾಹನ ಸ್ಕೂಟರ್ ಗೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಅವರ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆ ಮಳವಳ್ಳಿ ಪಟ್ಟಣದ ಹೊರ ಹೊಲಯದ ಕೊಳ್ಳೆಗಾಲ ರಸ್ತೆಯ ಕಣಿಗಲ್ ಹಳ್ಳದ ಬಳಿ ನಡೆದಿದೆ.
ಕುಂದೂರು ಗ್ರಾಮದ ಶಿಲ್ಪ( 39) ಮೃತಪಟ್ಟವರು. (7)ವರ್ಷದ ಅನನ್ಯ ಹಾಗೂ (5)ವರ್ಷದ ಮಾನ್ಯ ಗಾಯಗೊಂಡ ಮಕ್ಕಳು, ಶುಕ್ರವಾರ ಸಾಯಂಕಾಲ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಪರಿಣಾಮ ಶಿಲ್ಪಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರೂ ಮಕ್ಕಳನ್ನು ಮಳವಳ್ಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.