ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕಿಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಸಿಎಂ, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿ ಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಗರಂ ಆಗಿದ್ದಾರೆ.
ವೈಟಿಪಿಎಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುತ್ತಿಗೆ ಕಾರ್ಮಿಕರನ್ನು ಇತ್ತೀಚೆಗೆ ಕೆಲಸದಿಂದ ವಜಾ ಮಾಡಲಾಗಿತ್ತುವೈಟಿಪಿಎಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುತ್ತಿಗೆ ಕಾರ್ಮಿಕರನ್ನು ಇತ್ತೀಚೆಗೆ ಕೆಲಸದಿಂದ ವಜಾ ಮಾಡಲಾಗಿತ್ತು. ಕಾರ್ಮಿಕರನ್ನು ಕೆಲಸಕ್ಕೆ ಮರು ನೇಮಕಾತಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಭದ್ರತೆ ಒದಗಿಸುವಂತೆ ಆಗ್ರಹಿಸಿದರು. ಜೊತೆಗೆ ತುಂಗಾಭದ್ರಾ ಹಂಗಾಮಿ ಗುತ್ತಿಗೆ ಕಾರ್ಮಿಕರ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು.