ಪ್ರವಾಹಪೀಡಿತ ಪ್ರದೇಶಗಳಲ್ಲಿ ಆಗಿರುವ ಹಾನಿ ಮತ್ತು ಸರ್ಕಾರ ತೆಗೆದುಕೊಂಡಿರುವ ಪರಿಹಾರ ಕ್ರಮಗಳು, ರಾಜ್ಯದ ಹಲವಾರು ಜಿಲ್ಲೆಯಲ್ಲಿ ಉಂಟಾಗಿರುವ ಬರಪರಿಸ್ಥಿತಿ ಹಾಗೂ ಸರ್ಕಾರ ಒದಗಿಸಿರುವ ನೆರವು, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ಅನುದಾನ ಕಡಿತದ ಬಗ್ಗೆ ಚರ್ಚಿಸುವುದಾಗಿ ಸಿದ್ದರಾಮಯ್ಯ ಸಭೆಯ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ತೀವ್ರ ಸ್ವರೂಪದ ಹೋರಾಟಕ್ಕೆ ಮುಂದಾಗಬೇಕಿದೆ.
ಈ ಕುರಿತು ಚರ್ಚಿಸಲು ಸಭೆ ಕರೆದಿರುವುದಾಗಿ ಮೂಲಗಳು ತಿಳಿಸಿವೆ.ಇದಕ್ಕಿಂತಲೂ ಪ್ರಮುಖವಾಗಿ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ವಿಳಂಬ ಮಾಡುತ್ತಿದೆ. ಸದರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯನವರು ಸತತ ಪ್ರಯತ್ನ ನಡೆಸಿದರೂ ಹೈಕಮಾಂಡ್ ಅಧಿಕೃತವಾಗಿ ಪ್ರಕಟಣೆ ಮಾಡುತ್ತಿಲ್ಲ.