ಬೆಂಗಳೂರು: ಕೋಲಾರ ಜಿಲ್ಲೆಯ ಯಲುವಳ್ಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಶಾಲಾ ಮಕ್ಕಳ ಕೈಲಿ ಮಲಗುಂಡಿ ಕ್ಲೀನಿಂಗ್ ಮಾಡಿಸಿದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪ್ರಕಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಶಾಲಾ ಮಕ್ಕಳು ಶೌಚಾಲಯದಲ್ಲಿ ಆಯಸಿಡ್ ಬಾಟಲ್ ಮತ್ತು ಬ್ಲೀಚಿಂಗ್ ಪೌಡರ್ ಹಿಡಿದು ಸ್ವಚ್ಚಗೊಳಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ವಲಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ.

ಇಂತಹ ಶಿಕ್ಷಕರನ್ನು ಶೀಘ್ರವೇ ಅಮಾನತ್ತು ಮಾಡುವಂತೆ ಪೋಷಕರ ಒತ್ತಾಯ ಮಾಡಿದ್ದಲ್ಲದೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಹಾಗೆ ಸರ್ಕಾರ ಮಕ್ಕಳ ಭವಿಷ್ಯದ ಕಡೆ ಗಮನ ಹರಿಸಬೇಕೆಂದು ಒತ್ತಾಯ ಕೂಡ ಮಾಡಿದರು.
