ಶಾಲಾ ವಿದ್ಯಾರ್ಥಿಗಳಿಗೆ ವಾರದ ಆರೂ ದಿನವೂ ಮೊಟ್ಟೆ ನೀಡುತ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ವಾರದ ಆರೂ ದಿನವೂ ಮೊಟ್ಟೆ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಶಿಕ್ಷಕರ ಕೊರತೆ, ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶಗಳನ್ನು ಸುಧಾರಿಸಲು ಕ್ರಮ, ಜನಸ್ಪಂದನಾ ಕಾರ್ಯಕ್ರಮಗಳನ್ನು ಕಡ್ಡಾಯಗೊಳಿಸುವುದು ಮತ್ತು ಮಾದಕ ದ್ರವ್ಯ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಎಂದು ತಿಳಿಸಿದ್ದಾರೆ.
ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಜನಸ್ಪಂದನಾ ಕಾರ್ಯಕ್ರಮ ಮಾಡಬೇಕು. ಶಾಲೆ, ಆಸ್ಪತ್ರೆ, ಅಂಗನವಾಡಿ, ವಸತಿಶಾಲೆ, ರುದ್ರ ಭೂಮಿಗೆ ಸರ್ಕಾರಿ ಜಮೀನು, ನಿವೇಶ ಕೊಡಬೇಕು. ಸರ್ಕಾರಿ ಜಮೀನು ಇಲ್ಲದಿದ್ದರೇ, ಖರೀದಿ ಮಾಡಿ ಕೊಡಬೇಕು. ಇದನ್ನು ಕಡ್ಡಾಯಗೊಳಿಸಲು ಸೂಚಿಸಿದ್ದೇನೆ. ಎಸ್ಸಿ, ಎಸ್ಟಿಗಳಿಗೆ ಸಿಂಧುತ್ವ ಪ್ರಮಾಣ ಪತ್ರ ಒಂದು ತಿಂಗಳೊಳಗೆ ನೀಡಬೇಕು ಎಂದು ಹೇಳಿದ್ದೇನೆ ಎಂದು ಹೇಳಿದರು.