ಶಾಲೆಯನ್ನು ಕಲರ್ಫುಲ್ ಆಗಿಸಿದ ‘ಕಿರಿಕ್’ ಡೈರೆಕ್ಟರ್..!

Date:

‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸಿನಿಮಾ ಇತ್ತೀಚಿಗೆ ತೆರೆಕಂಡು ಕನ್ನಡ ಚಿತ್ರರಂಗದಲ್ಲಿ ವಿಭಿನ್ನವಾಗಿ ಸದ್ದು ಮಾಡಿತ್ತು. ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಅನೇಕರನ್ನು ಕನ್ನಡ ಶಾಲೆಯತ್ತ ತಿರುಗಿ ನೋಡುವಂತೆ ಮಾಡಿತ್ತು. ಆದ್ರೆ ರಿಷಬ್ ಶೆಟ್ಟಿ ಶೂಟಿಂಗ್ಗೆ ಮಾತ್ರ ಶಾಲೆಯನ್ನು ಬಳಸಿಕೊಂಡು ಸುಮ್ಮನಾಗಲಿಲ್ಲ ಮುಚ್ಚುವ ಭೀತಿ ಎದುರಿಸುತ್ತಿದ್ದ ಆ ಶಾಲೆಯನ್ನೆ ದತ್ತು ಪಡೆದಿದ್ರು.
ಕೇವಲ ನೆಪ ಮಾತ್ರಕ್ಕೆ ದತ್ತು ಪಡೆದು ಸುಮ್ಮನಾಗಿಲ್ಲ. ಆ ಶಾಲೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಕಲರ್ಫುಲ್ ಆಗಿಸಿದ್ದಾರೆ. ಬೇಸಿಗೆ ರಜೆ ಮುಗಿಸಿ ಬರುವ ಮಕ್ಕಳಿಗೆ ಸರ್ಪ್ರೈಸ್ ನೀಡಿದ್ದಾರೆ. ಶಾಲೆಗೆ ಸುಣ್ಣ ಬಣ್ಣ ಬಳಿದು ಮಾಡ್ರನ್ ಶಾಲೆಯನ್ನಾಗಿ ಮಾಡಿದ್ದಾರೆ. ಶಾಲೆಯ ಗೋಡೆ ಮೇಲೆ ಬಣ್ಣ ಬಣ್ಣದ ಚಿತ್ತಾರ, ಕಲೆ, ಸಾಹಿತ್ಯ, ಸಂಸ್ಕೃತಿಯ ಚಿತ್ರಗಳನ್ನು ಬಿಡಿಸುವ ಮೂಲಕ ರಿಷಭ್ ಶೆಟ್ಟಿ ಶಾಲೆಗೆ ಹೊಸ ರೂಪ ನೀಡಿದ್ದಾರೆ.
ಬೇಸಿಗೆ ರಜೆ ಕಳೆದು ಬರುವ ಮಕ್ಕಳಿಗೆ ಹೊಸ ಶಾಲೆ, ಹೊಸ ಕಲಿಕೆ, ಹೊಸ ಜೀವನದ ಮೂಲಕ ಭವಿಷ್ಯ ನೀಡುವ ಪ್ರಯತ್ನದಲ್ಲಿ ಮೊದಲ ಹೆಜ್ಜೆ ಇಟ್ಟಿದ್ದೇವೆ. ಆ ಮಕ್ಕಳ ಭವಿಷ್ಯಕ್ಕೂ ನಮ್ಮ ಪ್ರಯತ್ನಕ್ಕೂ ನಿಮ್ಮ ಸಹಕಾರವಿರಲಿ ಅಂತಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಕ್ಕಳಿಗೆ ಶುಭ ಹಾರೈಸಿದ್ದಾರೆ. ಕನ್ನಡ ಶಾಲೆಯ ಉಳಿವಿಗಾಗಿ ಸಹಕಾರ ನೀಡ್ತೀರೋದು ನಿಜಕ್ಕೂ ಹೆಮ್ಮೆಯ ವಿಷಯ

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...