ಶಾಸಕರ ಕ್ಷೇತ್ರಗಳಿಗೆ ಸಿಎಂ ಕೊಟ್ಟ ಕೊಡುಗೆ ಏನು ಗೊತ್ತಾ ?

admin
0 Min Read

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ 10 ಜಿಲ್ಲೆಗಳ ಬಿಜೆಪಿ ಶಾಸಕರ ಜೊತೆ ಯಡಿಯೂರಪ್ಪನವರು ಸಮಾಲೋಚನೆ ನಡೆಸಿದ್ದು, ನೆರೆ – ಬರ ಪರಿಹಾರ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ತಲಾ 25 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಗದಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರುಗಳು ಈ ಸಭೆಯಲ್ಲಿ ಭಾಗಿಯಾಗಿದ್ದು, ಅವರುಗಳ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಿದ್ದಾರೆ.

Share This Article
Leave a Comment