ಯಾವ ಶಾಸಕರ ಮನವೊಲಿಸುವ ಅವಶ್ಯಕತೆ ಇಲ್ಲ ಎಂದು ಬೆಂಗಳೂರಿನಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಸರ್ಕಾರ ಉಳಿಯಬೇಕು ಎಂಬುದು ಎಲ್ಲರ ಆಶಯವಾಗಿದೆ. ಯಾರ್ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ. ಬಿಜೆಪಿಯವರು ಏನು ಮಾಡುತ್ತಿದ್ದಾರೆ ಎಂಬುದು ಕೂಡ ಗೊತ್ತಿದೆ. ಯಾರು ಕಣ್ಣುಮುಚ್ಚಿಕೊಂಡು ರಾಜಕಾರಣ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.
ಶಾಸಕ ನಾಗೇಂದ್ರ ಬುದ್ಧಿವಂತರು. ಅವರು ಕಾಂಗ್ರೆಸ್ ನಲ್ಲೇ ಇರುತ್ತಾರೆ. ಶಾಸಕ ಆನಂದ್ ಸಿಂಗ್ ಈಗಲೂ ನನ್ನ ಆತ್ಮೀಯ ಸ್ನೇಹಿತರು. ಅವರು ರಾಜೀನಾಮೆ ವಾಪಸ್ ಪಡೆಯುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ದಿನೇಶ್ ಗುಂಡೂರಾವ್ ವಿದೇಶ ಪ್ರವಾಸ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಸರಕಾರಕ್ಕೆ ಏನೂ ಆಗಲ್ಲ ಎಂದು ಅವರಿಗೆ ಗೊತ್ತಿದೆ.ಹಾಗಾಗಿ ವಿದೇಶ ಪ್ರವಾಸಕ್ಕೆ ಹೋಗಿದ್ದಾರೆ. ಎಲ್ಲರೂ ಡಿಕೆಶಿ, ಸಿದ್ದರಾಮಯ್ಯ ಆಗುವುದಕ್ಕೆ ಆಗುತ್ತಾ ಎಂದು ಅವರು ಪ್ರಶ್ನಿಸಿದ್ದಾರೆ.