ಶಾಸಕ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ

Date:

ಶಾಸಕ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ

ಬೆಂಗಳೂರು: ಮಾಜಿ ಸಚಿವ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಈ ಹಿಂದೆ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಷರತ್ತು ವಿಧಿಸಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್‌ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು. ಪೂರ್ವಾನುಮತಿ ಪಡೆದು ಈಗಾಗಲೇ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಿದ್ದಾರೆ. ಆದರೆ, ಇನ್ಮುಂದೆ ಮುಕ್ತವಾಗಿ ಬಳ್ಳಾರಿಗೆ ತೆರಳಬಹುದಾಗಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...