No menu items!
3.1 C
Munich
Thursday, April 30, 2026

ಶಾಸಕ ಜಮೀರ್ ಅಹಮ್ಮದ್ ಖಾನ್ ರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ಯಾರು ಗೊತ್ತಾ?

Must read

ಚುನಾವಣೆಗೆ ಸ್ಪರ್ಧಿಸುವ ವೇಳೆ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಜಮೀರ್ ಅಹಮ್ಮದ್‍ಖಾನ್ ಅವರು ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಾವು ಚಲುವರಾಯಸ್ವಾಮಿ ಅವರಿಂದ 42 ಲಕ್ಷ ರೂ.ಗಳನ್ನು ಸಾಲ ಪಡೆದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಆದರೆ, ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಚಲುವರಾಯಸ್ವಾಮಿ ಅವರು ತಮ್ಮ ಪ್ರಮಾಣ ಪತ್ರದಲ್ಲಿ ಜಮೀರ್ ಅವರಿಗೆ ಸಾಲ ನೀಡಿರುವ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ.ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿರುವ ಜಮೀರ್ ಅಹಮ್ಮದ್‍ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article