ಶಾಸಕ ಬಿಆರ್ ಪಾಟೀಲ್ ಆಡಿಯೋ ವೈರಲ್ ವಿಚಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು..?
ಬೆಂಗಳೂರು: ವಸತಿ ಯೋಜನೆಯಲ್ಲಿ ಲಂಚದ ಆರೋಪದ ಕುರಿತು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಮತ್ತು ವಸತಿ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಡುವಿನ ಆಡಿಯೋ ಸೋರಿಕೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಿ.ಆರ್. ಪಾಟೀಲ್ ಏನು ಮಾತನಾಡಿದ್ದಾರೆ ಎನ್ನುವುದು ನನಗಿನ್ನೂ ಅರ್ಥ ಆಗಿಲ್ಲ. ಈ ವಿಚಾರ ಮುಖ್ಯಮಂತ್ರಿಗಳ ಗಮನಕ್ಕೆ ಬಂದಿದೆ. ಅವರು ಈ ವಿಚಾರವಾಗಿ ಕ್ರಮ ಕೈಗೊಳ್ಳಲಿದ್ದಾರೆ. ಪಾರದರ್ಶಕವಾಗಿ ವಸತಿ ಹಂಚಿಕೆಯಾಗುವಾಗ ಫಲಾನುಭವಿ ಹಣ ನೀಡಲು ಹೇಗೆ ಸಾಧ್ಯ?
ವಸತಿ ಹಂಚುವ ನಿರ್ಧಾರ ತೆಗೆದುಕೊಳ್ಳುವವರು ಪಂಚಾಯ್ತಿ ಹಾಗೂ ಸ್ಥಳೀಯ ಸಂಸ್ಥೆಗಳು. ನಮ್ಮ ಸರ್ಕಾರದಲ್ಲಿ ಇಂತಹ ವಿಚಾರ ಇಲ್ಲ. ಈ ವಿಚಾರವಾಗಿ ನಾನು ಹಾಗೂ ಸಿಎಂ, ಶಾಸಕರ ಜೊತೆ ಮಾತನಾಡುತ್ತೇವೆ. ಬಿ.ಆರ್ ಪಾಟೀಲ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ, ಅದು ಸರಿ ಇಲ್ಲ ಎಂದು ಹೇಳಿದರು.